ಇಬ್ಬರು ಮಕ್ಕಳೊಂದಿಗೆ ರೈಲಿಗೆ ತಲೆಕೊಟ್ಟು ತಾಯಿ ಆತ್ಮಹತ್ಯೆ

ಈ ಸುದ್ದಿಯನ್ನು ಶೇರ್ ಮಾಡಿ

Train

ವಿಜಯಪುರ, ಮಾ.13- ಕೌಟುಂಬಿಕ ಕಲಹದಿಂದ ನೊಂದ ತಾಯಿ ಇಬ್ಬರು ಮಕ್ಕಳೊಂದಿಗೆ ರೈಲಿಗೆ ತಲೆಕೊಟ್ಟು ಧಾರುಣವಾಗಿ ಮೃತಪಟ್ಟಿರುವ ಘಟನೆ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಇಂಡಿ ತಾಲ್ಲೂಕಿನ ಸಾತಪುರ ಗ್ರಾಮದ ನಿವಾಸಿಗಳಾದ ಲಕ್ಷ್ಮೀ ಪ್ರಕಾಶ ಬೂದಿಹಾಳ(35), ಬೀರಪ್ಪ (3), ಒಂದೂವರೆ ವರ್ಷದ ಅಂಕುಶಾ ಮೃತಪಟ್ಟಿದ್ದು, ಏಳು ವರ್ಷದ ಮಗಳು ದಾನಮ್ಮ ಪಾರಾಗಿದ್ದಾಳೆ.  ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಮನ ನೊಂದ ಲಕ್ಷ್ಮಿ ಇಂದು ಮುಂಜಾನೆ ತನ್ನ ಮೂವರು ಮಕ್ಕಳೊಂದಿಗೆ ವಿಜಯಪುರ ಜಿಲ್ಲೆ ಇಂಡಿಯ ರೈಲ್ವೆ ನಿಲ್ದಾಣದ ಬಳಿ ಬಂದು ಮಕ್ಕಳೊಂದಿಗೆ ರೈಲಿಗೆ ತಲೆ ಕೊಟ್ಟಿದ್ದಾರೆ.

ಪರಿಣಾಮವಾಗಿ ತಾಯಿಯೊಂದಿಗೆ ಇಬ್ಬರು ಮಕ್ಕಳು ಸಹ ಸಾವನ್ನಪ್ಪಿದ್ದು , ಮತ್ತೊಬ್ಬ ಮಗಳು ದಾನಮ್ಮ ಪ್ರಾಣಾಪಾಯದಿಂದ ಪಾರಾಗಿದ್ದಾಳೆ. ಸುದ್ದಿ ತಿಳಿದ ರೈಲ್ವೆ ಠಾಣೆ ಪೊಲೀಸರು ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿ ಮೂವರ ಶವಗಳನ್ನು ಸರ್ಕಾರಿ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆಗೆ ಒಳಪಡಿಸಿ ಮುಂದಿನ ಕ್ರಮ ಕೈಗೊಂಡಿದ್ದಾರೆ.

Facebook Comments
( ಎಚ್ಚರಿಕೆ..! : ಈ ಸಂಜೆ ಸುದ್ದಿಗಳನ್ನು ನಕಲು ಮಾಡುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುತ್ತಿದೆ )

Sri Raghav

Admin