ಈ ಶಾಸಕರ ಸ್ವಗ್ರಾಮದಲ್ಲಿಯೇ ಕುಡಿಯುವ ನೀರಿಗೆ ಹಾಹಾಕಾರ, ಜನರ ಆಕ್ರೋಶ

ಈ ಸುದ್ದಿಯನ್ನು ಶೇರ್ ಮಾಡಿ

Narendra--01

ಹನೂರು, ಮಾ.13- ಶಾಸಕ ಆರ್. ನರೇಂದ್ರರವರ ಸ್ವಗ್ರಾಮ ದೊಡ್ಡಿಂದುವಾಡಿ ಗ್ರಾಮದಲ್ಲಿ ಒಂದು ತಿಂಗಳಿಂದ ಕುಡಿಯುವ ನೀರಿಗೆ ಹಾಹಾಕಾರ ಉಂಟಾಗಿ ಸಾರ್ವಜನಿಕರು ನೀರಿಗಾಗಿ ಪರದಾಡುವ ಸ್ಥಿತಿ ನಿರ್ಮಾಣವಾಗಿದ್ದರೂ, ಅಧಿಕಾರಿ ಮತ್ತು ಜನಪ್ರತಿನಿಧಿಗಳು ಇತ್ತ ಗಮನಹರಿಸದ ಬಗ್ಗೆ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ದೊಡ್ಡಿಂದುವಾಡಿ ಗ್ರಾಮದ ಐದನೇ ವಾರ್ಡಿನಲ್ಲಿ ಸುಮಾರು ಒಂದು ತಿಂಗಳಿಂದ ಕುಡಿಯುವ ನೀರಿಗೆ ತೊಂದರೆಯಾಗಿದೆ. ಹತ್ತಾರು ಭಾರಿ ಗ್ರಾಪಂಗೆ ತೆರಳಿ ಕುಡಿಯುವ ನೀರನ ವ್ಯವಸ್ಥೆ ಸರಿಪಡಿಸುವಂತೆ ಮನವಿ ಮಾಡಿದರೂ ಗ್ರಾ.ಪಂ. ಅಭಿವೃದ್ದಿ ಅಧಿಕಾರಿ ಮರಿಸ್ವಾಮಿ ನಿರ್ಲಕ್ಷ್ಯ ಹಾಗೂ ಉಡಾಫೆ ಧೋರಣೆಯಿಂದ ಕುಡಿಯುವ ನೀರಿಗಾಗಿ ನಿತ್ಯ ಪರಿತಪಿಸುವಂತಾಗಿದೆ ಎಂದು ಆರೋಪಿಸಿದ್ದಾರೆ. ಪ್ರತಿ ನಿತ್ಯ ಕೂಲಿ ಕೆಲಸ ಬಿಟ್ಟು ಕಿರುನೀರು ಸರಬರಾಜು ತೊಂಬೆ ಹತ್ತಿರ ನಿಂತು ಬಿರು ಬಿಸಿಲಲ್ಲಿ ಮಹಿಳೆಯರು ಮತ್ತು ಮಕ್ಕಳು ಒಣಗುತ್ತಿದ್ದರೂ ಅಧಿಕಾರಿಗಳು ಮತ್ತು ಜನಪ್ರತಿನಿಧಿಗಳು ಕ್ಯಾರೆ ಅನ್ನದಿರುವುದು ವಿಪರ್ಯಾಸ ಸಂಗತಿ.

ಐದಾರು ದಿನಗಳಲ್ಲಿ ಯುಗಾದಿ ಹಬ್ಬ ಬರುತ್ತಿದ್ದು, ಅಧಿಕಾರಿಗಳು ಮತ್ತು ಜನಪ್ರತಿನಿಧಿಗಳು ತಕ್ಷಣ ಎಚ್ಚೆತ್ತುಕೊಂಡು ಕಾರ್ಯ ಪ್ರವೃತ್ತಿಯಾಗಿ ನೀರಿನ ಸಮಸ್ಯೆ ಬಗೆ ಹರಿಸದೇ ಹೋದಲ್ಲಿ ಗ್ರಾಮದ ಎಲ್ಲಾ ಮಹಿಳಾ ಸಂಘದ ಸಹಾಯ ಪಡೆದು ಗ್ರಾಮ ಪಂಚಾಯಿತಿಗೆ ಬೀಗ ಜಡಿದು ಪ್ರತಿಭಟನೆ ಮಾಡಬೇಕಾಗುತ್ತದೆ ಎಂದು ಎಚ್ಚರಿಸಿದ್ದಾರೆ. ಗ್ರಾಮದ ಮುಖಂಡ ಲಿಂಗರಾಜು ಮಾತನಾಡಿ, ನೀರಿನ ಸಮಸ್ಯೆ ಬಗೆಯಾರಿಸುವಂತೆ ಅಧಿಕಾರಿಗಳಿಗೆ ಕೇಳಿದರೆ ಟ್ರಾನ್ಸ್‍ಫಾರ್ಮರ್ ಸುಟ್ಟುವಾಗಿದೆ. ಅದನ್ನು ರಿಪೇರಿ ಮಾಡಿಸಲು 30ಸಾವಿರ ರೂ. ಬೇಕಾಗುತ್ತದೆ. ಅಷ್ಟೊಂದು ಹಣ ಎಲ್ಲಿಂದ ತರಲಿ ಎಂದು ನಮ್ಮನ್ನೇ ಪ್ರಶ್ನಿಸುತ್ತಾರೆ ಎಂದರು.

Facebook Comments

Sri Raghav

Admin