ಕೋಮುವಾದ ಆಧಾರದ ಮೇಲೆ ಚುನಾವಣೆ ಗೆಲ್ಲಲು ಹೊರಟಿದೆ ಬಿಜೆಪಿ : ಕೃಷ್ಣಬೈರೇಗೌಡ

ಈ ಸುದ್ದಿಯನ್ನು ಶೇರ್ ಮಾಡಿ

Krishanbyregowda
ಚಿಕ್ಕಬಳ್ಳಾಪುರ, ಮಾ.13- ಯುವಕರಲ್ಲಿ ಜಾತಿ, ಧರ್ಮ ಎಂಬ ಭಾವನಾತ್ಮಕ ವಿಷಯಗಳನ್ನು ಬಲವಾಗಿ ಬಿತ್ತುವ ಮೂಲಕ ಬಿಜೆಪಿ ಕೋಮುವಾದ ಆಧಾರದ ಮೇಲೆ ಚುನಾವಣೆ ಗೆಲ್ಲಲು ಹೊರಟಿದೆ ಎಂದು ಕೃಷಿ ಸಚಿವ ಕೃಷ್ಣಬೈರೇಗೌಡ ಲೇವಡಿ ಮಾಡಿದ್ದಾರೆ. ಪ್ರದೇಶ ಕಾಂಗ್ರೆಸ್ ಸಮಿತಿ ಯುವ ಘಟಕದ ವತಿಯಿಂದ ನಗರದಲ್ಲಿ ಹಮ್ಮಿಕೊಂಡಿದ್ದ ನನ್ನಕರ್ನಾಟಕ ಅಭಿಯಾನ ಸಂವಾದ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ರಾಜ್ಯದಲ್ಲಿ ನಮ್ಮದೇ ಪಕ್ಷ ಅಧಿಕಾರಕ್ಕೆ ಬರಲಿದೆ ಎಂದು ಹಗಲುಗನಸು ಕಾಣುತ್ತಿರುವ ಬಿಜೆಪಿಯ ಕಾರ್ಯತಂತ್ರಕ್ಕೆ ಯಾವುದೆ ಫಲ ಸಿಗದು ಎಂದರು.

CB-Pura

ದೇಶದ ಪ್ರಗತಿ ಯುವ ಸಮುದಾಯದ ಮೇಲೆ ನಿಂತಿದೆ. ಆದರೆ, ಇದನ್ನೇ ಬಂಡವಾಳ ಮಾಡಿಕೊಳ್ಳುತ್ತಿರುವ ಬಿಜೆಪಿ ಪಕ್ಷವು, ಯುವಕರಲ್ಲಿ ಜಾತಿ, ಧರ್ಮದ ಹೆಸರಲ್ಲಿ ಕೋಮು ಗಲಭೆ ಸೃಷ್ಟಿಸಲು ಮುಂದಾಗಿದೆ. ರಾಜ್ಯದಲ್ಲಿ ಯಾರೇ ಸತ್ತರೂ ಅದಕ್ಕೆ ಕೋಮುವಾದಿ ಬಣ್ಣ ಹಚ್ಚುವ ಬಿಜೆಪಿಯವರು, ಅದೇ ಕೋಮುವಾದಿ ತತ್ವಗಳ ಮೂಲಕ ಚುನಾವಣೆಯಲ್ಲಿ ಗೆಲ್ಲುವ ಭ್ರಮೆಯಲ್ಲಿದ್ದಾರೆ ಎಂದು ಆರೋಪಿಸಿದರು.
ಶಾಸಕ ಡಾ: ಕೆ.ಸುಧಾಕರ್ ಮಾತನಾಡಿ, ಯಾವುದೇ ಚುನಾವಣೆಯಲ್ಲಿ ಯುವ ಸಮುದಾಯದ ಪಾತ್ರ ಅತ್ಯಂತ ಮಹತ್ತರವಾಗಿದೆ. ಆದ್ದರಿಂದ ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಸರಕಾರವು ಮತ್ತೊಮ್ಮೆ ಅಧಿಕಾರ ಹಿಡಿಯಲಿದೆ ಎಂಬ ಸಂಪೂರ್ಣ ವಿಶ್ವಾಸವಿದೆ ಎಂದರು. ರಾಷ್ಟ್ರೀಯ ಯುವ ಕಾಂಗ್ರೆಸ್ ಉಪಾಧ್ಯಕ್ಷ ಅಮೃತಗೌಡ, ಪ್ರಧಾನ ಕಾರ್ಯದರ್ಶಿ ಬಸವನಗೌಡ, ಕಾರ್ಯದರ್ಶಿ ವರಪ್ರಸಾದ್ ಮತ್ತಿತರರು ಪಾಲ್ಗೊಂಡಿದ್ದರು.

Facebook Comments

Sri Raghav

Admin