ಇವಿಎಂ ಯಂತ್ರಗಳಿರುವ ಕೊಠಡಿಗೆ ರಕ್ಷಣೆಯೇ ಇಲ್ಲ , ಡಿಸಿ ಶಿವಕುಮಾರ್ ಗರಂ

ಈ ಸುದ್ದಿಯನ್ನು ಶೇರ್ ಮಾಡಿ

EVM--01

ಮೈಸೂರು, ಮಾ.14-ವಿದ್ಯುನ್ಮಾನ ಮತಯಂತ್ರಗಳ ಭದ್ರತೆಗೆ ನಿಯೋಜಿಸಲ್ಪಟ್ಟ ಪೊಲೀಸರು ಕರ್ತವ್ಯದಲ್ಲಿ ಇರದ ಹಿನ್ನೆಲೆಯಲ್ಲಿ ಅವರ ವಿರುದ್ಧ ಕ್ರಮಕೈಗೊಳ್ಳುವಂತೆ ನೂತನ ಜಿಲ್ಲಾಧಿಕಾರಿ ಶಿವಕುಮಾರ್ ಅವರು ನಗರ ಪೊಲೀಸ್ ಆಯುಕ್ತರಿಗೆ ಕ್ರಮಕೈಗೊಳ್ಳುವಂತೆ ಸೂಚಿಸಿದ್ದಾರೆ.  ನಗರದ ಶೇಷಾದ್ರಿ ಅಯ್ಯರ್ ರಸ್ತೆಯಲ್ಲಿರುವ ಮೈಸೂರು ಮಹಾನಗರ ಪಾಲಿಕೆಯ ವಲಯ ಕಚೇರಿ ಆವರಣದ ಗೋದಾಮುವೊಂದರಲ್ಲಿ ವಿದ್ಯುನ್ಮಾನ ಮತಯಂತ್ರಗಳನ್ನು ಇರಿಸಲಾಗಿದೆ. ಇದನ್ನು ನೋಡಿಕೊಳ್ಳಲು ನಗರ ಶಸ್ತ್ರಾಸ್ತ್ರ ಪೊಲೀಸರನ್ನು ನಿಯೋಜಿಸಲಾಗಿದೆ. ನೂತನ ಜಿಲ್ಲಾಧಿಕಾರಿ ಶಿವಕುಮಾರ್ ಅವರು ಇಂದು ಬೆಳಗ್ಗೆ ಮತಯಂತ್ರಗಳನ್ನು ಇಟ್ಟಿರುವ ಸ್ಥಳಕ್ಕೆ ಭೇಟಿ ನೀಡಿದಾಗ ಕರ್ತವ್ಯ ನಿರ್ವಹಿಸಬೇಕಾದ ಯಾವ ಪೊಲೀಸರು ಅಲ್ಲಿ ಇರಲಿಲ್ಲ. ಈ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿಗಳು ನಗರ ಪೊಲೀಸ್ ಆಯುಕ್ತರಾದ ಸುಬ್ರಹ್ಮಣ್ಯೇಶ್ವರ್ ಅವರನ್ನು ಸಂಪರ್ಕಿಸಿ ಭದ್ರತಾ ಸಿಬ್ಬಂದಿ ವಿರುದ್ಧ ಶಿಸ್ತುಕ್ರಮ ಕೈಗೊಂಡು ವರದಿ ಸಲ್ಲಿಸುವಂತೆ ತಿಳಿಸಿದ್ದಾರೆ.

Facebook Comments

Sri Raghav

Admin