ಮಲ್ಯ ಆಸ್ಪತ್ರೆಯಿಂದ ಲೋಕಾಯುಕ್ತ ವಿಶ್ವನಾಥ ಶೆಟ್ಟಿ ಡಿಸ್ಚಾರ್ಜ್

ಈ ಸುದ್ದಿಯನ್ನು ಶೇರ್ ಮಾಡಿ

Lokayukta--01

ಬೆಂಗಳೂರು, ಮಾ.14-ಲೋಕಾಯುಕ್ತ ಕಚೇರಿಯಲ್ಲೇ ವ್ಯಕ್ತಿಯೊಬ್ಬರಿಂದ ಚಾಕು ಇರಿತಕ್ಕೊಳಗಾಗಿ ಆಸ್ಪತ್ರೆಗೆ ದಾಖಲಾಗಿದ್ದ ಲೋಕಾಯುಕ್ತ ನ್ಯಾಯಮೂರ್ತಿ ವಿಶ್ವನಾಥ ಶೆಟ್ಟಿ ಇಂದು ಡಿಸ್ಚಾರ್ಜ್ ಆಗಿದ್ದಾರೆ.  ಕಳೆದ ಎಂಟು ದಿನಗಳ ಹಿಂದೆ ವಕೀಲರಂತೆ ವೇಷ ಧರಿಸಿ ಚಾಕು ಸಮೇತ ಲೋಕಾಯುಕ್ತ ಕಚೇರಿಗೆ ಆಗಮಿಸಿದ್ದ ರಾಜಸ್ಥಾನ ಮೂಲದ ಉದ್ಯಮಿ ತೇಜ್‍ರಾಜ್ ಶರ್ಮ ಎಂಬಾತ ವಿಶ್ವನಾಥ ಶೆಟ್ಟಿ ಅವರ ಮೇಲೆ ಚಾಕುವಿನಿಂದ ಹಲ್ಲೆ ನಡೆಸಿದ್ದ.

ತೀವ್ರವಾಗಿ ಗಾಯಗೊಂಡಿದ್ದ ವಿಶ್ವನಾಥ ಶೆಟ್ಟಿ ಅವರನ್ನು ಮಲ್ಯ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಎಂಟು ದಿನಗಳಿಂದ ಚಿಕಿತ್ಸೆ ಪಡೆಯುತ್ತಿದ್ದ ಲೋಕಾಯುಕ್ತರ ಆರೋಗ್ಯದಲ್ಲಿ ಚೇತರಿಕೆ ಕಂಡುಬಂದ ಹಿನ್ನೆಲೆಯಲ್ಲಿ ಅವರನ್ನು ಇಂದು ಡಿಸ್ಚಾರ್ಜ್ ಮಾಡಲಾಯಿತು. ಡಿಸ್ಚಾರ್ಜ್ ಆದರೂ ವಿಶ್ರಾಂತಿ ಪಡೆಯುವಂತೆ ವೈದ್ಯರು ಸೂಚಿಸಿರುವ ಹಿನ್ನೆಲೆಯಲ್ಲಿ ವಿಶ್ವನಾಥ ಶೆಟ್ಟಿ ಅವರು ಇನ್ನೂ ಕೆಲ ದಿನಗಳ ಕಾಲ ಲೋಕಾಯುಕ್ತ ಕಚೇರಿಗೆ ಆಗಮಿಸುವ ಸಾಧ್ಯತೆ ಇಲ್ಲ.

Facebook Comments

Sri Raghav

Admin