ಜೀವನದಲ್ಲಿ ಜಿಗುಪ್ಸೆಗೊಂಡು ರೈಲಿಗೆ ತಲೆಕೊಟ್ಟು ಯುವಕ ಆತ್ಮಹತ್ಯೆ

ಈ ಸುದ್ದಿಯನ್ನು ಶೇರ್ ಮಾಡಿ

suicide--01
ಚಿಕ್ಕಬಳ್ಳಾಪುರ, ಮಾ.15- ಜೀವನದಲ್ಲಿ ಜಿಗುಪ್ಸೆಗೊಂಡಿರುವ ಯುವಕನೋರ್ವ ರೈಲಿಗೆ ಸಿಲುಕಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಚಿಂತಾಮಣಿ ತಾಲ್ಲೂಕಿನ ಮಾಡಿಕೆರೆ ಕ್ರಾಸ್ ಸಮೀಪದ ರೈಲ್ವೆ ಹಳಿ ಬಳಿ ಸಂಭವಿಸಿದೆ. ಚಿಂತಾಮಣಿ ತಾಲ್ಲೂಕಿನ ಕೋಪಸಂದ್ರ ಗ್ರಾಮದ ಶಿವಕುಮಾರ್ (25) ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ ಎಂದು ಗುರುತಿಸಲಾಗಿದೆ. ಶಿವಕುಮಾರ್ ಹಲವು ದಿನಗಳಿಂದ ಮಾನಸಿಕ ಅಸ್ವಸ್ಥನಾಗಿದ್ದು , ಇದರಿಂದ ಜಿಗುಪ್ಸೆಗೊಂಡು ಚಿಕ್ಕಬಳ್ಳಾಪುರ-ಕೋಲಾರ ಪ್ಯಾಸೆಂಜರ್ ರೈಲಿಗೆ ಸಿಲುಕಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎನ್ನಲಾಗಿದೆ. ಈ ಸಂಬಂಧ ಚಿಂತಾಮಣಿ ಗ್ರಾಮಾಂತರ ಠಾಣೆ ಪೊಲೀಸರು ಪರಿಶೀಲನೆ ನಡೆಸಿದ್ದಾರೆ.

Facebook Comments

Sri Raghav

Admin