ತಾಂತ್ರಿಕ ದೋಷದಿಂದಾಗಿ ಹೊತ್ತಿ ಉರಿದ ಸ್ಕೂಲ್ ಬಸ್

ಈ ಸುದ್ದಿಯನ್ನು ಶೇರ್ ಮಾಡಿ

School-Bus

ಮಂಗಳೂರು,ಮಾ.15-ಶಾಲಾ ಬಸ್‍ಗೆ ಬೆಂಕಿ ತಗುಲಿ ಸಂಪೂರ್ಣ ಹಾನಿಗೀಡಾಗಿದ್ದು, ಅದೃಷ್ಟವಶಾತ್ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ದಕ್ಷಿಣ ಕನ್ನಡ ಜಿಲ್ಲೆ ಸುಳ್ಯ ತಾಲ್ಲೂಕಿನ ಅಜ್ಜಾವರ ಬಳಿ ಶಾಲಾ ಬಸ್ ಸಂಪೂರ್ಣ ಬೆಂಕಿಗೆ ಆಹುತಿಯಾಗಿದೆ. ಇಂದು ಬೆಳಗ್ಗೆ ಎಂದಿನಂತೆ ಸುಳ್ಯದ ಕೆವಿಜಿ ಶಿಕ್ಷಣ ಸಂಸ್ಥೆಗೆ ಸೇರಿದ ಶಾಲಾ ಬಸ್ ವಿದ್ಯಾರ್ಥಿಗಳನ್ನು ಕರೆತರಲು ಹೋಗುತ್ತಿತ್ತು. ಅಜ್ಜಾ ವರ ಬಳಿ ಬರುತ್ತಿದ್ದಂತೆ ತಾಂತ್ರಿಕ ದೋಷದಿಂದಾಗಿ ಬಸ್ ಕೆಳಗೆ ಬೆಂಕಿ ಕಾಣಿಸಿಕೊಂಡಿದೆ. ನಂತರ ಈ ಬೆಂಕಿ ಸಂಪೂರ್ಣ ಬಸ್‍ಗೆ ಆವರಿಸುತ್ತಿದ್ದಂತೆ ಚಾಲಕ ತಕ್ಷಣ ಬಸ್‍ನ್ನು ರಸ್ತೆಬದಿ ನಿಲ್ಲಿಸಿ ಒಳಗಿದ್ದ ಇಬ್ಬರನ್ನು ಹೊರಗೆ ತರುವಲ್ಲಿ ಯಶಸ್ವಿಯಾಗಿದ್ದಾರೆ.

ಬಸ್ ಚಾಲಕನ ಸಮಯ ಪ್ರಜ್ಞೆಯಿಂದಾಗಿ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಸುದ್ದಿ ತಿಳಿದ ಸುಳ್ಯ ಠಾಣೆ ಪೊಲೀಸರು ಹಾಗೂ ಅಗ್ನಿ ಶಾಮಕ ದಳ ಸ್ಥಳಕ್ಕಾಗಮಿಸಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾದರಾದರೂ ಬಸ್ ಸಂಪೂರ್ಣ ಬೆಂಕಿಗೆ ಆಹುತಿಯಾಗಿತ್ತು. ಸುಳ್ಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Facebook Comments

Sri Raghav

Admin