ಸಿದ್ದರಾಮಯ್ಯ ಹಿಂದುಳಿದವರಿಗೆ ಏನು ಮಾಡಿದ್ದಾರೆ.. ? ಈಶ್ವರಪ್ಪ ಪ್ರಶ್ನೆ

ಈ ಸುದ್ದಿಯನ್ನು ಶೇರ್ ಮಾಡಿ

Eshwarappa-And-Siddaramaiah
ದಾವಣಗೆರೆ, ಮಾ.15-ಹಿಂದುಳಿದ ವರ್ಗಗಳ ಅಭಿವೃದ್ಧಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಯಾವ ಯೋಜನೆಗಳನ್ನು ಮಾಡಿದ್ದಾರೆ ಎಂದು ವಿಧಾನಪರಿಷತ್ ವಿರೋಧ ಪಕ್ಷದ ನಾಯಕ ಕೆ.ಎಸ್.ಈಶ್ವರಪ್ಪ ಪ್ರಶ್ನಿಸಿದ್ದಾರೆ. ನಗರದ ಅಕ್ಕ ಮಹಾದೇವಿ ಕಲ್ಯಾಣ ಮಂಟಪದಲ್ಲಿ ನಡೆದ ಬಿಜೆಪಿ ಯುವ ಮೋರ್ಚಾ ಒಬಿಸಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯನವರು ದಲಿತರು, ಹಿಂದುಳಿದ ವರ್ಗಗಳ ಅಭಿವೃದ್ಧಿಗೆ ನಾನಾ ಯೋಜನೆಗಳನ್ನು ಜಾರಿಗೆ ತಂದಿದ್ದೇವೆ ಎಂದು ಬಡಾಯಿ ಕೊಚ್ಚಿಕೊಳ್ಳುತ್ತಿದ್ದಾರೆ. ಯಾವ ಯೋಜನೆಯಿಂದ ದಲಿತರಿಗೆ, ಹಿಂದುಳಿದ ವರ್ಗದವರಿಗೆ ಪ್ರಯೋಜನವಾಗಿದೆ ಎಂದು ಹೇಳಿದರು. ನಾನೇ ಅವರ ಪಾದಕ್ಕೆ ಎರಗುತ್ತೇನೆ ಎಂದರು.
ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಬಹುಮತಗಳೊಂದಿಗೆ ಅಧಿಕಾರಕ್ಕೆ ಬರಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು. ಹಿಂದಿನ ಚುನಾವಣೆಯಲ್ಲಿ ಕೆಜೆಪಿ, ಬಿಜೆಪಿ ಎಂದು ವಿಂಗಡಣೆಯಾಗಿದ್ದರಿಂದ ಬಿಜೆಪಿ ಅಧಿಕಾರಕ್ಕೆ ಬರಲು ಸಾಧ್ಯವಾಗಲಿಲ್ಲ. ಅದನ್ನು ದುರುಪಯೋಗಪಡಿಸಿಕೊಂಡ ಸಿದ್ದರಾಮಯ್ಯ ಅಧಿಕಾರದ ಚುಕ್ಕಾಣಿ ಹಿಡಿದು ಹಿಂದುಳಿದವರು ಹಾಗೂ ದಲಿತರನ್ನು ಕಡೆಗಣಿಸಿದರು ಎಂದು ಹೇಳಿದರು.

Facebook Comments

Sri Raghav

Admin