5 ಹಣ್ಣಿನ ಅಂಗಡಿಗಳಿಗೆ ಬೆಂಕಿಯಿಟ್ಟ ದುಷ್ಕರ್ಮಿಗಳು

ಈ ಸುದ್ದಿಯನ್ನು ಶೇರ್ ಮಾಡಿ
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ಕಲಬುರ್ಗಿ, ಮಾ.15- ದುಷ್ಕರ್ಮಿಗಳು ಐದು ಹಣ್ಣಿನ ಅಂಗಡಿಗಳಿಗೆ ಬೆಂಕಿ ಹಚ್ಚಿ ದುಷ್ಕøತ್ಯ ಮೆರೆದಿರುವ ಘಟನೆ ನೀಡಂ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಪಟ್ಟಣದ ಬಸ್ ನಿಲ್ದಾಣ ಬಳಿ ಹಣ್ಣಿನ ಗೂಡಂಗಡಿಗಳನ್ನಿಟ್ಟುಕೊಂಡು ವ್ಯಾಪಾರಿಗಳು ಜೀವನ ನಡೆಸುತ್ತಿದ್ದರು. ತಡರಾತ್ರಿ ದುಷ್ಕರ್ಮಿಗಳು ಐದು ಹಣ್ಣಿನ ಗೂಡಂಗಡಿಗಳಿಗೆ ಬೆಂಕಿ ಹಚ್ಚಿರುವುದರಿಂದ ಸಾವಿರಾರು ರೂ. ಮೌಲ್ಯದ ಹಣ್ಣುಗಳು ಹಾಳಾಗಿವೆ. ಇಂದು ಮುಂಜಾನೆ ಈ ವಿಷಯ ತಿಳಿದ ಹಣ್ಣಿನ ವ್ಯಾಪಾರಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕೂಡಲೇ ದುಷ್ಕರ್ಮಿಗಳನ್ನು ಪತ್ತೆ ಹಚ್ಚಿ ಕಠಿಣ ಕ್ರಮ ಕೈಗೊಳ್ಳಬೇಕು.

ಈ ಹಿಂದೆಯೂ ಮೂರು ಬಾರಿ ಹಣ್ಣಿನ ಅಂಗಡಿಗಳಿಗೆ ಬೆಂಕಿ ಹಚ್ಚಲಾಗಿತ್ತು ಎಂದು ವ್ಯಾಪಾರಿಗಳು ಅಳಲು ತೋಡಿಕೊಂಡರು. ನೀಡಂ ಠಾಣೆ ಪೊಲೀಸರು ಸ್ಥಳಕ್ಕೆ ತೆರಳಿ ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.

Facebook Comments

Sri Raghav

Admin