ಕಾರಿನಲ್ಲಿ ಹೆಲ್ಮೆಟ್ ಹಾಕಿ ಬಂದವರಿಂದ ಮನೆ ಮುಂದೆ ನಿಲ್ಲಿಸಿದ್ದ ಕಾರು ಜಖಂ

ಈ ಸುದ್ದಿಯನ್ನು ಶೇರ್ ಮಾಡಿ
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ರಾಮನಗರ, ಮಾ.20-ಕಾರಿನಲ್ಲಿ ಬಂದ ದುಷ್ಕರ್ಮಿಗಳು ಮನೆ ಮುಂದೆ ನಿಲ್ಲಿಸಿದ್ದ ಕಾರನ್ನು ಜಖಂಗೊಳಿಸಿರುವ ಘಟನೆ ಐಜೂರು ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.ಲೋಕೇಶ್‍ಗೌಡ ಅವರ ಮನೆ ಬಳಿ ನಿಲ್ಲಿಸಲಾಗಿದ್ದ ಕಾರಿನ ಗಾಜುಗಳನ್ನು ಒಡೆದು ಹಾಕಿ ಹಾನಿ ಮಾಡಲಾಗಿದೆ. ನಿನ್ನೆ ರಾತ್ರಿ ಸುಮಾರು 1.30ರ ಸಮಯದಲ್ಲಿ ಕಾರಿನ ಗಾಜು ಒಡೆದ ಸದ್ದು ಕೇಳಿ ಹೊರ ಬಂದು ನೋಡಿದಾಗ ಹೆಲ್ಮೆಟ್ ಧರಿಸಿದ್ದ ದುಷ್ಕರ್ಮಿಗಳು ಬಿಳಿ ಕಾರಿನಲ್ಲಿ ಅಲ್ಲಿಂದ ಪರಾರಿಯಾಗಿದ್ದಾರೆ. ಈ ಸಂಬಂಧ ಐಜೂರು ಠಾಣೆ ಪೊಲೀಸರಿಗೆ ದೂರು ನೀಡಲಾಗಿದ್ದು, ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಮುಂದಿನ ಕ್ರಮಕೈಗೊಂಡಿದ್ದಾರೆ.

Facebook Comments
( ಎಚ್ಚರಿಕೆ..! : ಈ ಸಂಜೆ ಸುದ್ದಿಗಳನ್ನು ನಕಲು ಮಾಡುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುತ್ತಿದೆ )

Sri Raghav

Admin