ಮಹತ್ವದ ಬೆಳವಣಿಗೆಯಲ್ಲಿ ಕೆಸಿಆರ್-ಮಮತಾ ಭೇಟಿ : ತೃತೀಯ ರಂಗ ಕುರಿತು ಚರ್ಚೆ

ಈ ಸುದ್ದಿಯನ್ನು ಶೇರ್ ಮಾಡಿ

KCR--01

ಕೊಲ್ಕತ್ತಾ, ಮಾ.20- ಮಹತ್ವದ ಬೆಳವಣಿಗೆಯಲ್ಲಿ ತೆಲಂಗಾಣ ಮುಖ್ಯಮಂತ್ರಿ ಕೆ. ಚಂದ್ರಶೇಖರ್ ರಾವ್ ಅವರು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿಯವರನ್ನು ಭೇಟಿಯಾಗಿದ್ದಾರೆ. ಇಂದು ಕೊಲ್ಕೊತ್ತಾಗೆ ತೆರಳಿ ಅವರು ದೀದಿಯನ್ನು ಭೇಟಿಯಾಗಿದ್ದು, ಭೇಟಿ ವೇಳೆ 2019ರ ಸಾರ್ವತ್ರಿಕ ಚುನಾವಣೆಯಲ್ಲಿ ಬಿಜೆಪಿ ಮತ್ತು ಕಾಂಗ್ರೆಸ್ ಪಕ್ಷಗಳನ್ನು ಎದುರಿಸಲು ತೃತೀಯ ರಂಗ ರಚನೆ ಸಂಬಂಧ ಚರ್ಚೆ ನಡೆಸಿದ್ದಾರೆ.

ಮಮತಾ ಭೇಟಿ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಚಂದ್ರಶೇಖರ್ ರಾವ್, ದೇಶಕ್ಕೆ ಪರ್ಯಾಯ ಪರಿಕಲ್ಪನೆಯ ಅಗತ್ಯವಿದೆ ಮತ್ತು ಪರ್ಯಾಯ ರಾಜಕೀಯ ಶಕ್ತಿ ಬೇಕಾಗಿದ್ದು, ನಾವು ಸಮಾನ ಸಿದ್ಧಾಂತ ಹೊಂದಿರುವ ಪಕ್ಷಗಳ ಜತೆ ಸಮಾಲೋಚನೆ ನಡೆಸುತ್ತಿದ್ದೇವೆ ಎಂದರು.
ಇದು ತೃತೀಯ ರಂಗದ ಆರಂಭ ಎಂದು ಬಣ್ಣಿಸಿದ ಅವರು, ತೃತೀಯ ರಂಗ ಜನರ ರಂಗವಾಗಲಿದೆ ಎಂದು ಅವರು ಹೇಳಿದ್ದಾರೆ.

Facebook Comments

Sri Raghav

Admin