ಡಿ.ಕೆ.ಶಿವಕುಮಾರ್ ಗೆ ಷರತ್ತುಬದ್ಧ ಜಾಮೀನು ಮಂಜೂರು

ಈ ಸುದ್ದಿಯನ್ನು ಶೇರ್ ಮಾಡಿ

D-K-Shivakumar

ಬೆಂಗಳೂರು, ಮಾ.22-ಐಟಿ ದಾಳಿ ವೇಳೆ ಸಾಕ್ಷ್ಯ ನಾಶ ಪ್ರಕರಣ ಆರೋಪಕ್ಕೆ ಸಂಬಂಧಿಸಿದಂತೆ ಇಂಧನ ಸಚಿವ ಡಿ.ಕೆ.ಶಿವಕುಮಾರ್ ಅವರಿಗೆ ವಿಶೇಷ ಆರ್ಥಿಕ ಅಪರಾಧ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ. ತೀವ್ರ ಕುತೂಹಲ ಕೆರಳಿಸಿದ್ದ ಈ ಪ್ರಕರಣದಲ್ಲಿ ವಾದ-ಪ್ರತಿವಾದ ಆಲಿಸಿದ ವಿಶೇಷ ಆರ್ಥಿಕ ಅಪರಾಧ ನ್ಯಾಯಾಲಯದ ನ್ಯಾಯಾಧೀಶರಾದ ಎಂ.ಎಸ್.ಅಳ್ವಾ ಅವರು ಷರತ್ತುಬದ್ಧ ಜಾಮೀನು ಮಂಜೂರು ಮಾಡಿದರು.

ಜಾಮೀನು ಮಂಜೂರು ಮಾಡಿದ ಹಿನ್ನೆಲೆಯಲ್ಲಿ ಬಂಧನ ಭೀತಿಯಿಂದ ಡಿಕೆಶಿ ಪಾರಾಗಿದ್ದಾರೆ.
ಗುಜರಾತ್ ರಾಜ್ಯಸಭಾ ಚುನಾವಣಾ ಸಂದರ್ಭದಲ್ಲಿ ಅಲ್ಲಿನ ಶಾಸಕರಿಗೆ ಆಶ್ರಯ ನೀಡಿದ್ದ ಸಂದರ್ಭದಲ್ಲಿ ಡಿಕೆಶಿ ನಿವಾಸ ಕಚೇರಿಗಳ ಮೇಲೆ ಐಟಿ ದಾಳಿ ನಡೆದಿತ್ತು. ಬಿಡದಿಯ ಈಗಲ್‍ಟನ್ ರೆಸಾರ್ಟ್‍ನಲ್ಲಿದ್ದ ಡಿ.ಕೆ.ಶಿವಕುಮಾರ್ ಸಾಕ್ಷ್ಯ ನಾಶ ಮಾಡಿದ್ದಾರೆ ಎಂದು ಆರೋಪಿಸಿ ಐಟಿ ಅಧಿಕಾರಿಗಳು ವಿಚಾರಣೆಗೆ ವಶಕ್ಕೆ ನೀಡುವಂತೆ ಕೋರಿ ವಿಶೇಷ ಆರ್ಥಿಕ ಅಪರಾಧ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು.
ಈಂದು ವಿಚಾರಣೆಗೆ ಹಾಜರಾದ ಡಿ.ಕೆ.ಶಿವಕುಮಾರ್ ಹಾಗೂ ಸಹೋದರ ಡಿ.ಕೆ.ಸುರೇಶ್ ಜಾಮೀನು ಮಾಡುವಂತೆ ಕೋರಿ ಮನವಿ ಸಲ್ಲಿಸಿದ್ದರು.

ಯಾವುದೇ ಸಾಕ್ಷ್ಯ ನಾಶಕ್ಕೆ ಪ್ರಯತ್ನ ಪಟ್ಟಿಲ್ಲ. ಸಾಕ್ಷಿಗಳನ್ನು ನಾಶ ಮಾಡಿಲ್ಲ. ವಿಚಾರಣೆಗೆ ಸಹಕರಿಸುವುದಾಗಿ ತಿಳಿಸಿದರು. ಐಟಿ ಪರ ವಕೀಲರು ಜಾಮೀನು ನೀಡದಂತೆ ಕೋರಿ ತಮ್ಮ ವಾದ ಮಂಡಿಸಿದ್ದರು. ವಾದ-ವಿವಾದ ಆಲಿಸಿದ ನ್ಯಾಯಾಲಯ 25 ಸಾವಿರ ರೂ.ಗಳ ಮೊತ್ತದ ಬಾಂಡ್ ಹಾಗೂ ಇಬ್ಬರ ಶ್ಯೂರಿಟಿ ನೀಡುವಂತೆ ಸೂಚಿಸಿ ಜಾಮೀನು ಮಂಜೂರು ಮಾಡಿದೆ.

Facebook Comments

Sri Raghav

Admin