ಸರ್ಕಾರದ ಮುಖ್ಯ ಕಾರ್ಯದರ್ಶಿಯಾಗಿ ರತ್ನಪ್ರಭಾ ಮುಂದುವರಿಕೆ..?

ಈ ಸುದ್ದಿಯನ್ನು ಶೇರ್ ಮಾಡಿ

Ratnapabha--02ಬೆಂಗಳೂರು, ಮಾ.23-ರಾಜ್ಯಸರ್ಕಾರದ ಮುಖ್ಯ ಕಾರ್ಯದರ್ಶಿ ಕೆ.ರತ್ನಪ್ರಭಾ ಅವರನ್ನು 3 ತಿಂಗಳ ಕಾಲ ಮುಂದುವರೆಸುವ ಸಾಧ್ಯತೆಗಳಿವೆ. ರತ್ನಪ್ರಭಾ ಅವರು ಮಾರ್ಚ್ ಅಂತ್ಯಕ್ಕೆ ಸೇವೆಯಿಂದ ನಿವೃತ್ತಿ ಹೊಂದುತ್ತಿದ್ದು, ಮತ್ತೆ 3 ತಿಂಗಳ ಅವಧಿಗೆ ಮುಖ್ಯ ಕಾರ್ಯದರ್ಶಿ ಹುದ್ದೆಯಲ್ಲಿ ಮುಂದುವರೆಸಲು ಸರ್ಕಾರ ಮುಂದಾಗಿದೆ. ರತ್ನಪ್ರಭಾ ಅವರ ಸೇವಾವಧಿಯನ್ನು ವಿಸ್ತರಣೆ ಮಾಡಬೇಕು ಎಂದು ಕೋರಿ ಮುಖ್ಯಮಂತ್ರಿ ಸಿದ್ದರಾಮಯ್ಯ ಕೇಂದ್ರ ಸರ್ಕಾರಕ್ಕೆ ಶುಕ್ರವಾರ ಶಿಫಾರಸ್ಸು ಮಾಡಿದ್ದಾರೆ.

ಮೂಲಗಳ ಪ್ರಕಾರ ರತ್ನಪ್ರಭಾ ಅವರ ಸೇವಾವಧಿ ವಿಸ್ತರಣೆಗೆ ಶಿಫಾರಸ್ಸು ಮಾಡಿ ಸಿಎಂ ಸಿದ್ದರಾಮಯ್ಯ ಅವರ ಕಚೇರಿ ಕೇಂದ್ರ ಸರ್ಕಾರಕ್ಕೆ ಪತ್ರ ಬರೆದಿದ್ದು, ರಾಜ್ಯ ವಿಧಾನಸಭೆ ಚುನಾವಣೆ ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ಚುನಾವಣಾ ಕಾರ್ಯವನ್ನು ಸಮರ್ಪಕವಾಗಿ ನಡೆಸುವ ಉದ್ದೇಶದಿಂದ ಮುಖ್ಯ ಕಾರ್ಯದರ್ಶಿಗಳ ಸೇವಾ ಅವಧಿಯನ್ನು 3 ತಿಂಗಳು ವಿಸ್ತರಿಸುವಂತೆ ರಾಜ್ಯ ಸರ್ಕಾರ ಶಿಫಾರಸು ಮಾಡಿದೆ ಎನ್ನಲಾಗಿದೆ. ಇನ್ನು ರಾಜ್ಯ ಸರ್ಕಾರದ ಪತ್ರಕ್ಕೆ ಕೇಂದ್ರ ಸರ್ಕಾರ ಇನ್ನೂ ಪ್ರತಿಕ್ರಿಯೆ ನೀಡಿಲ್ಲವಾದರೂ, ಕೇಂದ್ರದ ಸಿಬ್ಬಂದಿ ಮತ್ತು ತರಬೇತಿ ಸಚಿವಾಲಯ ಈ ಕುರಿತು ನಿರ್ಧಾರ ತೆಗೆದುಕೊಳ್ಳಲಿದೆ.

Facebook Comments

Sri Raghav

Admin