ಮೈಸೂರಲ್ಲಿ ಚಾಮುಂಡೇಶ್ವರಿ ದರ್ಶನ ಪಡೆದ ರಾಹುಲ್ ಗಾಂಧಿ

ಈ ಸುದ್ದಿಯನ್ನು ಶೇರ್ ಮಾಡಿ

ಮೈಸೂರು, ಮಾ.24- ಸಾಂಸ್ಕøತಿಕ ನಗರಿ ಮೈಸೂರಿನಲ್ಲಿಂದು ರಾಹುಲ್ ಮೇನಿಯಾ… ಹೈದರಾಬಾದ್-ಕರ್ನಾಟಕ, ಮುಂಬೈ-ಕರ್ನಾಟಕ, ಕರಾವಳಿ ಪ್ರದೇಶದಲ್ಲಿ ಯಶಸ್ವಿ ಜನಾಶೀರ್ವಾದ ಯಾತ್ರೆ ನಡೆಸಿದ ಎಐಸಿಸಿ ಅಧ್ಯಕ್ಷ ರಾಹುಲ್‍ಗಾಂಧಿ ಅವರು ಇಂದಿನಿಂದ ಎರಡು ದಿನಗಳ ಕಾಲ ಮೈಸೂರು-ಚಾಮರಾಜನಗರ ಜಿಲ್ಲೆಯಲ್ಲಿ ಕೈಗೊಂಡಿರುವ ನಾಲ್ಕನೆ ಹಂತದ ಜನಾಶೀರ್ವಾದ ಯಾತ್ರೆಗೆ ಅದ್ಧೂರಿ ಪ್ರಾರಂಭ ದೊರೆಯಿತು. ನವದೆಹಲಿಯಿಂದ ನೇರವಾಗಿ ಚಾಮುಂಡೇಶ್ವರಿ ಬೆಟ್ಟಕ್ಕೆ ಆಗಮಿಸಿದ ಅವರು, ನಾಡತಾಯಿ ಶ್ರೀ ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿ ಆಶೀರ್ವಾದ ಪಡೆದರು. ಮುಖ್ಯಮಂತ್ರಿ ಸಿದ್ದರಾಮಯ್ಯ, ಪಕ್ಷದ ಉಸ್ತುವಾರಿ ವೇಣುಗೋಪಾಲ್, ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ್, ಡಿ.ಕೆ.ಶಿವಕುಮಾರ್ ಸೇರಿದಂತೆ ಹಲವು ಗಣ್ಯರು ಪೂಜೆಯಲ್ಲಿ ಪಾಲ್ಗೊಂಡಿದ್ದರು.

 

Rahul--01

Facebook Comments

Sri Raghav

Admin