ಬಸ್‍ನಲ್ಲೇ ನೇಣು ಹಾಕಿಕೊಂಡು ನಿರ್ವಾಹಕ ಆತ್ಮಹತ್ಯೆ

ಈ ಸುದ್ದಿಯನ್ನು ಶೇರ್ ಮಾಡಿ

Bus--01
ಬೀದರ್,ಮಾ.25- ಸರ್ಕಾರಿ ಬಸ್ ನಿರ್ವಾಹಕರೊಬ್ಬರು ಬಸ್‍ನಲ್ಲಿಯೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಶಿವರಾಜ್ ಕುಂಬಾರೆ ಮುಧೋಳ(50) ಆತ್ಮಹತ್ಯೆಗೆ ಶರಣಾಗಿರುವ ನಿರ್ವಾಹಕ. ಈತ ಈಶಾನ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಸಿಬ್ಬಂದಿಯಾಗಿದ್ದು , ಜಿಲ್ಲೆಯ ಬಸವ ಕಲ್ಯಾಣ ಬಸ್ ಡಿಪೋದಲ್ಲಿ ಬಸ್‍ನಲ್ಲಿಯೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದು, ಇಂದು ಬೆಳಗ್ಗೆ ಆತ್ಮಹತ್ಯೆ ಬೆಳಕಿಗೆ ಬಂದಿದೆ. ಆತ್ಮಹತ್ಯೆಗೆ ಕಾರಣ ಏನೆಂಬುದು ತಿಳಿದುಬಂದಿಲ್ಲ. ಸ್ಥಳಕ್ಕೆ ಭೇಟಿ ನೀಡಿದ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.

Facebook Comments

Sri Raghav

Admin