ಸಮಾಜ ವಿಭಜಿಸುವುದರಲ್ಲಿ ಸಿದ್ದರಾಮಯ್ಯ ಸರ್ಕಾರಕ್ಕೆ ಹೆಚ್ಚು ಆಸಕ್ತಿ : ಪ್ರಧಾನ್ ಟೀಕೆ

ಈ ಸುದ್ದಿಯನ್ನು ಶೇರ್ ಮಾಡಿ

Dharmendra-Pradhan

ಮಂಗಳೂರು,ಮಾ.25-ರಾಜ್ಯ ಸರ್ಕಾರಕ್ಕೆ ಅಭಿವೃದ್ದಿಗಿಂತ ಸಮಾಜವನ್ನು ವಿಭಜಿಸುವ ಕಡೆ ಹೆಚ್ಚು ಆಸಕ್ತಿ ಇದೆ ಎಂದು ಕೇಂದ್ರ ಪೆಟ್ರೋಲಿಯಂ ಸಚಿವ ಧರ್ಮೇಂದ್ರ ಪ್ರಧಾನ್ ಟೀಕಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಸರ್ಕಾರ ಅಭಿವೃದ್ದಿ ಬಗ್ಗೆ ಆಲೋಚಿಸಿಲ್ಲ. ಸಮಾಜವನ್ನು ವಿಭಜಿಸುವ ಪ್ರಯತ್ನ ಮಾಡಿದೆ. ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದ್ದು , ರಾಜ್ಯದಲ್ಲಿ ಭ್ರಷ್ಟಾಚಾರ ತುಂಬಿ ತುಳುಕುತ್ತಿದೆ ಎಂದರು.

ಪ್ರಧಾನಿ ನರೇಂದ್ರ ಮೋದಿ ಅವರಿಗೆ ಅಭಿವೃದ್ದಿಯ ಬದ್ಧತೆ ಇರುವುದರಿಂದ ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ಜನರು ಬಿಜೆಪಿಗೆ ಆಶೀರ್ವಾದ ಮಾಡಲಿದ್ದಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.  ಪೆಟ್ರೋಲಿಯಂ ಕೂಡ ಜಿಎಸ್‍ಟಿ ವ್ಯಾಪ್ತಿಗೆ ಬರಬೇಕೆಂಬುದು ತಮ್ಮ ಒತ್ತಾಯವಾಗಿದ್ದು, ಜಿಎಸ್‍ಟಿ ಸಂಸ್ಥೆಗೆ ಈ ಸಂಬಂಧ ಮನವರಿಕೆ ಮಾಡಿಕೊಡಲಾಗುವುದು ಎಂದರು.  ಇದರಿಂದ ಗ್ರಾಹಕರು ಮತ್ತು ಈ ಸರ್ಕಾರಿ ಸ್ವಾಮ್ಯದ ಸಂಸ್ಥೆಗಳಿಗೆ ಲಾಭವಾಗಲಿದೆ. ಈ ವರ್ಷಾಂತ್ಯದೊಳಗೆ ಕೊಚ್ಚಿಯಿಂದ ಮಂಗಳೂರಿಗೆ ಅನಿಲ ಸಂಪರ್ಕ ಪೂರ್ಣಗೊಳ್ಳಲಿದ್ದು , ಎಂಆರ್‍ಪಿಎಲ್ ಮತ್ತು ಎಎಂಪಿಎಲ್ ವಿಲೀನ ಪ್ರಕ್ರಿಯೆ ಅಂತಿಮ ಹಂತದಲ್ಲಿದೆ. ಬಿಎಸ್6 ಗುಣಮಟ್ಟದ ಪೆಟ್ರೋಲಿಯಂ ಉತ್ಪನ್ನಗಳು ಲಭ್ಯವಾಗಲಿವೆ ಎಂದು ಹೇಳಿದರು.

Facebook Comments

Sri Raghav

Admin