ಅಸ್ವಸ್ಥಗೊಂಡ ಹಿರಿಯ ನಟಿ ಜಯಂತಿ ಆಸ್ಪತ್ರೆಗೆ ದಾಖಲು

ಈ ಸುದ್ದಿಯನ್ನು ಶೇರ್ ಮಾಡಿ

Jayanti--003

ಬೆಂಗಳೂರು, ಮಾ. 26- ಅಭಿನಯ ಶಾರದೆ, ಬಹುಭಾಷಾ ನಟಿ ಜಯಂತಿ ಅವರು ಇಂದು ಅಸ್ವಸ್ಥಗೊಂಡು ನಗರದ ವಿಕ್ರಂ ಆಸ್ಪತ್ರೆಗೆ ದಾಖಲಾಗಿದ್ದಾರೆ. ಹಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿರುವ ಜಯಂತಿ ಅವರು ಇಂದು ತಮ್ಮ ನಿವಾಸದಲ್ಲಿ ಉಸಿರಾಟದ ತೊಂದರೆ ಕಾಣಿಸಿಕೊಂಡಿದ್ದು ಅವರನ್ನು ವಿಕ್ರಂ ಆಸ್ಪತ್ರೆಗೆ ದಾಖಲಿಸಲಾಗಿದೆ. ಆಸ್ಪತ್ರೆಯ ವೈದ್ಯರು ಜಯಂತಿ ಅವರನ್ನು ಪರೀಕ್ಷಿಸಿದ್ದು ಐಸಿಯುನಲ್ಲಿ ಹೆಚ್ಚಿನ ಚಿಕಿತ್ಸೆ ನೀಡುತ್ತಿದ್ದಾರೆ. ಜಯಂತಿ ಅವರು ಚಿಕಿತ್ಸೆಗೆ ಸ್ಪಂದಿಸುತ್ತಿದ್ದು ಆರೋಗ್ಯವಾಗಿದ್ದಾರೆ, ಅಭಿಮಾನಿಗಳು ಯಾವುದೇ ರೀತಿಯ ಆತಂಕಪಡುವ ಅಗತ್ಯವಿಲ್ಲ ಎಂದು ಆಸ್ಪತ್ರೆಯ ಮೂಲಗಳು ತಿಳಿಸಿವೆ.

Facebook Comments

Sri Raghav

Admin