ಸುತ್ತೂರು ಶ್ರೀಗಳ ಜೊತೆ ಅಮಿತ್ ಷಾ ಗೌಪ್ಯ ಮಾತುಕತೆ

ಈ ಸುದ್ದಿಯನ್ನು ಶೇರ್ ಮಾಡಿ

Amit-Shah-Suttur-1

ಮೈಸೂರು, ಮಾ.30-ಮುಖ್ಯಮಂತ್ರಿಗಳ ತವರು ಜಿಲ್ಲೆಯಲ್ಲಿ ಬಿಜೆಪಿಯ ಚಾಣಕ್ಯ ಅಮಿತ್ ಷಾ ಮಿಂಚಿನ ಪ್ರವಾಸ ಪ್ರಾರಂಭಿಸಿದ್ದು, ಬೆಳಿಗ್ಗೆ ಚಾಮುಂಡಿ ಬೆಟ್ಟದ ತಪ್ಪಿನಲ್ಲಿರುವ ಸುತ್ತೂರು ಶಾಖಾ ಮಠಕ್ಕೆ ಭೇಟಿ ನೀಡಿ ಶ್ರೀಗಳ ಆಶೀರ್ವಾದ ಪಡೆದರು. ಮಠಕ್ಕೆ ಆಗಮಿಸಿದ ಅಮಿತ್ ಷಾ ಅವರನ್ನು ಪೂರ್ಣಕುಂಭ ಸ್ವಾಗತ ಕೋರಲಾಯಿತು. ನಂತರ ಹಾರ ಹಾಕಿ ಗಣಪತಿಯ ವಿಗ್ರಹವನ್ನು ಸುತ್ತೂರು ಶ್ರೀ ಶಿವರಾತ್ರಿ ದೇಶೀ ಕೇಂದ್ರ ಸ್ವಾಮೀಜಿಯವರು ನೀಡಿದರು.

Amit-Shah-Suttur-3

ಅಮಿತ್ ಷಾ ಶ್ರೀಗಳ ಕಾಲಿಗೆರಗಿ ಆಶೀರ್ವಾದ ಪಡೆದರು. ಸುತ್ತೂರು ಶ್ರೀಗಳೊಂದಿಗೆ ಸುಮಾರು 30 ನಿಮಿಷಕ್ಕೂ ಹೆಚ್ಚು ಕಾಲ ಅಮಿತ್‍ಷಾ ಗೌಪ್ಯವಾಗಿ ಮಾತುಕತೆ ನಡೆಸಿದರು. ಈ ಸಂದರ್ಭದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಹಾಗು ಕೇಂದ್ರ ಸಚಿವ ಅನಂತ್‍ಕುಮಾರ್ ಉಪಸ್ಥಿತರಿದ್ದರು. ಸುತ್ತೂರು ಮಠಕ್ಕೆ ಅಮಿತ್ ಷಾ ಬಂದ ವೇಳೆ ವರುಣಾ ಕ್ಷೇತ್ರದ ಬಿಜೆಪಿ ಮುಖಂಡರು ಮನವಿ ಪತ್ರ ನೀಡಿ ನಮ್ಮ ಕ್ಷೇತ್ರದಲ್ಲಿ ಈ ಬಾರಿ ಕಾಂಗ್ರೆಸ್‍ನಿಂದ ಮುಖ್ಯಮಂತ್ರಿಗಳ ಪುತ್ರ ಯತೀಂದ್ರ ಸ್ಪರ್ಧಿಸುತ್ತಿದ್ದಾರೆ. ಅವರ ವಿರುದ್ಧವಾಗಿ ಬಿ.ಎಸ್.ಯಡಿಯೂರಪ್ಪ ಅವರ ಪುತ್ರ ವಿಜಯೇಂದ್ರ ಅವರಿಗೆ ಟಿಕೆಟ್ ನೀಡಬೇಕೆಂದು ಒತ್ತಾಯಿಸಿದರು. ಇದಕ್ಕೆ ಏನನ್ನೂ ಪ್ರತಿಕ್ರಿಯಿಸದೆ ಶಾ ಸ್ಮೈಲ್ ನೀಡಿ ಮುನ್ನಡೆದರು.

Amit-Shah-Suttur-2

Facebook Comments

Sri Raghav

Admin