ಚಿತ್ರದುರ್ಗದ ಕಲ್ಲಿನ ಕೋಟೆಯಲ್ಲಿ ಮೈಸೂರಿನ ಮಹಾರಾಜ

ಈ ಸುದ್ದಿಯನ್ನು ಶೇರ್ ಮಾಡಿ

Mysuru
ಚಿತ್ರದುರ್ಗ. ಏ.01 : ಇಂದು ಚಿತ್ರದುರ್ಗದ ಕಲ್ಲಿನ ಕೋಟೆಗೆ ಮೈಸೂರಿನ ಮಹಾರಾಜ ಯದುವೀರ ಒಡೆಯರ್ ಭೇಟಿ ನೀಡಿದ್ದರು. ಇದೇ ಮೊದಲ ಬಾರಿಗೆ ಕೋಟೆಗೆ ಭೇಟಿ ನೀಡಿದ್ದ ಮಾಹಾರಾಜ ಕೋಟೆಯ ವೀಕ್ಷೆಣೆ ಮಾಡಿ ಪಾಳೇಗಾರರ ಅಧಿದೇವತೆ ಏಕನಾಥೇಶ್ವರಿ ದರ್ಶನ ಪಡೆದರು. ಕೋಟೆಯ ಬಗ್ಗೆ ವಿವರಣೆ ಪಡೆದ ಯದುವೀರ್ ನಂತರ ಮಾತನಾಡಿ, ಇದೇ ಮೊದಲ ಬಾರಿಗೆ ಕೋಟೆಗೆ ಭೇಟಿ ನೀಡಿದ್ದೇನೆ, ಐತಿಹಾಸಿಕ ಕೋಟೆ ನೋಡಿ ತುಂಬಾ ಸಂತೋಷವಾಗಿದೆ, ರಾಜ್ಯದ ರಾಜ ಮನೆತನಗಳಿಗೆ ಅವಿನಾಭಾವ ಸಂಬಂಧವಿದೆ, ನನ್ನ ಅಜ್ಜಿ ಗಾಯಿತ್ರಿದೇವಿ ಅವರ ಹೆಸರಿನಲ್ಲಿ ಹಾಗೂ ವಾಣಿ ವಿಲಾಸ ಜಲಾಶಯಗಳಿವೆ ಎಂದರು. ರಾಜ್ಯದ ಎಲ್ಲಾ ಸಂಸ್ಥಾನಗಳನ್ನು ಸಂಪರ್ಕಿಸುವ ಕಾರಿಡಾರ್ ಮಾಡುವ ಚಿಂತನೆ ಇದೆ, ಆ ಮೂಲಕ ಪ್ರವಾಸೋದ್ಯಮ ಅಭಿವೃದ್ಧಿಪಡಿಸಬಹುದು, ಪ್ರವಾಸಿಗರೂ ಕೂಡ ಇಂತಹ ಈತಿಹಾಸಿಕ ಸ್ಥಳಗಳ ಸ್ವಚ್ಚತೆ ಕಾಪಾಡಿಕೊಳ್ಳಬೇಕು ಎಂದು ಮನವಿ ಮಾಡಿದರು.

ಇನ್ನು ರಾಜಕೀಯಕ್ಕೆ ಬರುತ್ತೀರಾ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, ಈಗಾಗಲೇ ನಾನು ರಾಜಕೀಯಕ್ಕೆ ಬರುವುದಿಲ್ಲ ಎಂದು ಈಗಾಗಲೇ ಸ್ಪಷ್ಟಪಡಿಸಿದ್ದೇನೆ, ಅಮಿತ್ ಷಾ ಅವರು ರಾಜಮಾತೆ ಪ್ರಮೋದಾದೇವಿ ಮತ್ತು ನನ್ನನ್ನು ಭೇಟಿ ಮಾಡಿದರು, ರಾಜಕೀಯಕ್ಕೆ ಬರುವಂತೆ ಒತ್ತಾಯಿಸಿದರು, ಆದರೆ ರಾಜ್ಯ ಸಭೆಗೆ ಆಯ್ಕೆ ಮಾಡಿರುವ ಬಗ್ಗೆ ಯಾವುದೇ ರೀತಿಯ ಆಫರ್ ನೀಡಿಲ್ಲ, ಜನರು ಬಯಸಿದರೆ ಮುಂದೆ ರಾಜಕೀಯಕ್ಕೆ ಬರುತ್ತೇನೆ, ಸದ್ಯಕ್ಕೆ ರಾಜಕೀಯ ನನ್ನ ದಾರಿಯಲ್ಲಿ ಇಲ್ಲ ಎಂದರು. ಯದುವೀರ ಅವರನ್ನು ನೋಡಲು ಮುಗಿಬಿದ್ದ ಪ್ರವಾಸಿಗರು ಮುಗಿಬಿದ್ದರು, ಮೈಸೂರಿನ ಮಹಾರಾಜನನ್ನು ಚಿತ್ರದುರ್ಗದ ಕೋಟೆಯಲ್ಲಿ ಕಂಡು
ಕೋಟೆನಾಡಿನ ಜನ ಪುಳಕಿತರಾದರು.

Facebook Comments

Sri Raghav

Admin