ತುಮಕೂರು ಮತ್ತು ಹುಬ್ಬಳ್ಳಿಯಲ್ಲಿ ದಾಖಲಾತಿ ಇಲ್ಲದೆ ಸಾಗಿಸುತ್ತಿದ್ದ 34 ಲಕ್ಷ ಹಣ ಜಪ್ತಿ

ಈ ಸುದ್ದಿಯನ್ನು ಶೇರ್ ಮಾಡಿ

Black-Money--02
ತುಮಕೂರು, ಏ.1- ಯಾವುದೇ ದಾಖಲೆಗಳಿಲ್ಲದೆ ಕಾರಿನಲ್ಲಿ ಸಾಗಿಸುತ್ತಿದ್ದ 10.50 ಲಕ್ಷ ರೂ. ಹಣವನ್ನು ಚೆಕ್ಪೋನಲ್ಲಿ ವಶಪಡಿಸಿಕೊಳ್ಳುವಲ್ಲಿ ಪಟ್ಟನಾಯ್ಕನಹಳ್ಳಿ ಠಾಣೆ ಪೊಲೀಸರು ಯಶಸ್ವಿಯಾಗಿದ್ದಾರೆ. ಶಿರಾ ತಾಲೂಕಿನ ಪಟ್ಟನಾಯ್ಕನಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯ ಲಕ್ಕನಹಳ್ಳಿ ಚೆಕ್ಪೋಸ್ಟ್ ಬಳಿ ಪಿಎಸ್ಐ ಪ್ರೀತಂ ಅವರನ್ನೊಳಗೊಂಡ ಸಿಬ್ಬಂದಿ ತಂಡ ಕಾರ್ಯಾಚರಣೆ ನಡೆಸುತ್ತಿತ್ತು. ರಾತ್ರಿ ಆಂಧ್ರ ಪ್ರದೇಶದ ಅಮರಾಪುರದಿಂದ ತುಮಕೂರು ಕಡೆ ಬರುತ್ತಿದ್ದ ಕಾರನ್ನು ತಡೆದು ಪ್ರೀತಂ ಅವರು ಪರಿಶೀಲನೆ ನಡೆಸಿದಾಗ ಅಕ್ರಮವಾಗಿ ಸಾಗಿಸುತ್ತಿದ್ದ 2 ಸಾವಿರ ಮುಖಬೆಲೆಯ 10.50 ಲಕ್ಷ ರೂ. ಹಣ ಪತ್ತೆಯಾಗಿದೆ. ಹಣದ ಬಗ್ಗೆ ವಿಚಾರಣೆ ನಡೆಸಿದಾಗ ಯಾವುದೇ ದಾಖಲಾತಿಗಳು ಲಭ್ಯವಾಗದ ಹಿನ್ನೆಲೆಯಲ್ಲಿ ಹಣವನ್ನು ವಶಕ್ಕೆ ಪಡೆದುಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.

ಹುಬ್ಬಳ್ಳಿ ವರದಿ :
22 ಲಕ್ಷ ಹಣ ಜಫ್ತಿ:  ದಾಖಲಾತಿ ಇಲ್ಲದೆ ಸಾಗಿಸುತ್ತಿದ್ದ 22 ಲಕ್ಷ ಹಣವನ್ನು ಗ್ರಾಮಾಂತರ ಠಾಣೆ ಪೊಲೀಸರು ವಶಪಡಿಸಿಕೊಂಡಿದ್ದಾರೆ. ನಗರದ ಹೊರವಲಯದ ಗಬ್ಬೂರು ಕ್ರಾಸ್ ಚೆಕ್ ಪೋಸ್ಟ್ ನಲ್ಲಿ ರಾತ್ರಿ ಗದಗ ಜಿಲ್ಲೆಯ ಲಕ್ಷ್ಮೇಶ್ವರ ಕೆನರಾ ಬ್ಯಾಂಕ್ನಿಂದ ಹುಬ್ಬಳ್ಳಿಯ ಪ್ರಧಾನ ಕಚೇರಿಗೆ ಕಾರಿನಲ್ಲಿ ದಾಖಲೆ ಇಲ್ಲದೆ 22 ಲಕ್ಷ ಹಣವನ್ನು ಸಾಗಿಸಲಾಗುತ್ತಿತ್ತು. ಈ ವೇಳೆ ಹುಬ್ಬಳ್ಳಿ ತಹಸೀಲ್ದಾರ್ ಶಶಿಧರ್ ಮಡ್ಯಾಳ ಹಾಗೂ ತನಿಖಾ ತಂಡ ಕಾರನ್ನು ಪರಿಶೀಲಿಸಿದಾಗ ಹಣ ಇರುವುದು ಪತ್ತೆಯಾಗಿದ್ದು, ಹಣವನ್ನು ವಶಪಡಿಸಿಕೊಂಡಿದ್ದಾರೆ. ಈ ಬಗ್ಗೆ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Facebook Comments

Sri Raghav

Admin