ವರುಣ ಕ್ಷೇತ್ರದಲ್ಲಿ ಅಖಾಡಕ್ಕಿಳಿದ ಬಿಎಸ್ವೈ ಪುತ್ರ ವಿಜಯೇಂದ್ರ, ಕಾರ್ಯಕರ್ತರ ಜೊತೆ ಸಭೆ

ಈ ಸುದ್ದಿಯನ್ನು ಶೇರ್ ಮಾಡಿ

Yatheendra-Vijendra

ಮೈಸೂರು, ಏ.2- ಬಿಜೆಪಿ ರಾಜ್ಯಾಧ್ಯಕ್ಷ ಯಡಿಯೂರಪ್ಪ ಅವರ ಪುತ್ರ ಬಿ.ವೈ.ವಿಜಯೇಂದ್ರ ಅವರು ಮೈಸೂರಿನ ವರುಣ ಕ್ಷೇತ್ರದಲ್ಲಿ ಇಂದು ಬಿಜೆಪಿ ಕಾರ್ಯಕರ್ತರ ಸಭೆ ನಡೆಸಲಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪುತ್ರ ಡಾ.ಯತೀಂದ್ರ, ವರುಣ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಎಂದು ಹೇಳಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ಯತೀಂದ್ರ ಅವರನ್ನು ಮುಂದಿನ ಚುನಾವಣೆಯಲ್ಲಿ ಸೋಲಿಸಲು ಬಿಜೆಪಿ, ಬಿಎಸ್‍ವೈ ಅವರ ಪುತ್ರನನ್ನು ಕಣಕ್ಕಿಳಿಸಲು ರಣತಂತ್ರ ರೂಪಿಸಿದೆ ಎಂದು ಹೇಳಲಾಗುತ್ತಿದೆ.

ಈ ಹಿನ್ನೆಲೆಯಲ್ಲಿ ವರುಣಾ ಕ್ಷೇತ್ರ ಬಿಜೆಪಿ ಅಭ್ಯರ್ಥಿ ಎಂದು ಬಿಂಬಿಸಲಾಗುತ್ತಿರುವ ವಿಜಯೇಂದ್ರ ಇಂದು ಬೆಳಗ್ಗೆ ಮಹದೇಶ್ವರ ಬೆಟ್ಟದಲ್ಲಿ ಪೂಜೆ ಸಲ್ಲಿಸಿ ನಂತರ ನಗರಕ್ಕೆ ಆಗಮಿಸಿದರು. ಮೈಸೂರಿಗೆ ಬಂದ ವಿಜಯೇಂದ್ರ ಚಾಮುಂಡಿಬೆಟ್ಟಕ್ಕೆ ತೆರಳಿ ದೇವಿ ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿ ನಂತರ ಸುತ್ತೂರು ಮಠಕ್ಕೆ ತೆರಳಿ ಶ್ರೀ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ ಅವರ ಆಶೀರ್ವಾದ ಪಡೆದು ಕೆಲ ನಿಮಿಷಗಳ ಕಾಲ ಅವರೊಂದಿಗೆ ಮಾತುಕತೆ ನಡೆಸಿದರು. ನಂತರ ಮೈಸೂರು-ಟಿ.ನರಸೀಪುರ ರಸ್ತೆಯಲ್ಲಿರುವ ವರುಣ ವಿಧಾನಸಭಾ ಕ್ಷೇತ್ರದ ನಾಡಹಳ್ಳಿಯಲ್ಲಿರುವ ಲಕ್ಷ್ಮಿ ಕಲ್ಯಾಣ ಮಂಟಪದಲ್ಲಿ ಏರ್ಪಡಿಸಿದ್ದ ವರುಣ ಕ್ಷೇತ್ರದ ಬಿಜೆಪಿ ಕಾರ್ಯಕರ್ತರ ಸಭೆಯಲ್ಲಿ ವಿಜಯೇಂದ್ರ ಭಾಗವಹಿಸಿದ್ದರು.

Facebook Comments

Sri Raghav

Admin