ಎರಡೂವರೆ ಲಕ್ಷ ಬೆಲೆ ಬಾಳುವ ಕೆಟಿಎಂ ಬೈಕ್‍ಗೆ ಬೆಂಕಿ ಇಟ್ಟ ದುಷ್ಕರ್ಮಿಗಳು

ಈ ಸುದ್ದಿಯನ್ನು ಶೇರ್ ಮಾಡಿ

KTM--01
ಗುಡಿಬಂಡೆ, ಏ.3- ಮನೆಯ ಮುಂದೆ ನಿಲ್ಲಿಸಿದ್ದ ಸುಮಾರು ಎರಡೂವರೆ ಲಕ್ಷ ಬೆಲೆ ಬಾಳುವ ದ್ವಿಚಕ್ರ ವಾಹನಕ್ಕೆ ಕಿಡಿಗೇಡಿಗಳು ಪೆಟ್ರೋಲ್ ಸುರಿದು ಬೆಂಕಿ ಹಚ್ಚಿರುವ ಘಟನೆ ಇಂದು ಬೆಳಗ್ಗೆ ನಗರದ ನಮ್ಮ ಗ್ರೋ ಮೋರ್ ಸೆಂಟರ್ ಬಳಿ ನಡೆದಿದೆ. ಹರೀಶ್ ಎಂಬುವರಿಗೆ ಸೇರಿದ ಎರಡೂವರೆ ಲಕ್ಷ ಬೆಲೆ ಬಾಳುವ ಕೆಟಿಎಂ ಎಂಬ ಬೈಕ್‍ಗೆ ದುಷ್ಕರ್ಮಿಗಳು ಇಂದು ಬೆಳಗಿನ ಜಾವ 3.30ರ ಸಮಯದಲ್ಲಿ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ್ದಾರೆ. ಬೆಂಕಿ ಮತ್ತು ದಟ್ಟ ಹೊಗೆಯಿಂದ ಹರೀಶ್ ಮನೆಯಿಂದ ಎದ್ದು ಬಂದು ನೋಡುವಷ್ಟರಲ್ಲಿ ಕಣ್ಣೆದುರಿಗೆ ಬೈಕ್ ಸುಟ್ಟು ಕರಕಲಾಗಿದೆ. ಯಾವ ಕಾರಣಕ್ಕಾಗಿ ಬೆಂಕಿ ಹಚ್ಚಲಾಗಿದೆ ಎಂಬುದು ತಿಳಿದು ಬಂದಿಲ್ಲ. ಈ ಸಂಬಂಧ ನಗರ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.

Facebook Comments

Sri Raghav

Admin