ಭಾರತ್ ಬಂದ್ ವೇಳೆ ಹಿಂಸಾಚಾರದಲ್ಲಿ ಸತ್ತವರ ಸಂಖ್ಯೆ 11ಕ್ಕೆ

ಈ ಸುದ್ದಿಯನ್ನು ಶೇರ್ ಮಾಡಿ

Bharat-abandh

ನವದೆಹಲಿ, ಏ.3-ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಮೇಲಿನ ದೌರ್ಜನ್ಯ ತಡೆ ಕಾಯ್ದೆಯನ್ನು ದುರ್ಬಲಗೊಳಿಸಲಾಗಿದೆ ಎಂದು ಆರೋಪಿಸಿ ದಲಿತ ಸಂಘಟನೆಗಳು ನಿನ್ನೆ ಕರೆ ನೀಡಿದ್ದ ಭಾರತ್ ಬಂದ್ ವೇಳೆ ನಡೆದ ಹಿಂಸಾಚಾರದಲ್ಲಿ ಮೃತಪಟ್ಟವರ ಸಂಖ್ಯೆ 11ಕ್ಕೇರಿದೆ. ಹಿಂಚಾಚಾರಕ್ಕೆ ಇಳಿದ ಪ್ರತಿಭಟನಾಕಾರರು ಎರಡು ಪ್ರಕರಣಗಳಲ್ಲಿ ಅಂಬ್ಯುಲೆನ್ಸ್ ವಾಹನಗಳು ತೆರಳಲು ಅಡ್ಡಿ ಪಡಿಸಿದ ಹಿನ್ನೆಲೆಯಲ್ಲಿ ಮಗು ಮತ್ತು ವೃದ್ದರೊಬ್ಬರು ಕೊನೆಯುಸಿರೆಳೆದ ಘಟನೆ ಬಿಹಾರ ಮತ್ತು ಉತ್ತರಪ್ರದೇಶದಲ್ಲಿ ನಡೆದಿದ್ದು, ಸತ್ತವರ ಸಂಖ್ಯೆ 11ಕ್ಕೇರಿದೆ.

ಬಿಹಾರದ ವೈಶಾಲಿ ಜಿಲ್ಲೆಯ ಹಾಜಿಪುರದಲ್ಲಿ ಮಗುವೊಂದನ್ನು ತುರ್ತು ಚಿಕಿತ್ಸೆಗಾಗಿ ಆಂಬ್ಯುಲೆನ್ಸ್‍ನಲ್ಲಿ ಆಸ್ಪತ್ರೆಗೆ ಕರೆದೊಯ್ಯಲಾಗುತ್ತಿತ್ತು. ಪ್ರತಿಭಟನಾಕಾರರು ಅಡ್ಡಿಪಡಿಸಿದ್ದರಿಂದ ಮಗು ವಾಹನದಲ್ಲೇ ಕೊನೆಯುಸಿರೆಳೆಯಿತು. ಮತ್ತೊಂದು ಪ್ರಕರಣದಲ್ಲಿ ಉತ್ತರ ಪ್ರದೇಶದ ಬಿಜ್ನೋರ್‍ನಲ್ಲೂ ತುರ್ತು ವೈದ್ಯಕೀಯ ಚಿಕಿತ್ಸೆ ಲಭಿಸದೇ 68 ವರ್ಷದ ವೃದ್ದರೊಬ್ಬರು ಅಸುನೀಗಿದರು. ಹಿಂಸೆಗೆ ನಿನ್ನೆ ಮಧ್ಯಪ್ರದೇಶದಲ್ಲಿ ಆರು, ರಾಜಸ್ತಾನದಲ್ಲಿ ಒಬ್ಬರು ಹಾಗೂ ಉತ್ತರಪ್ರದೇಶದಲ್ಲಿ ಇಬ್ಬರು ಬಲಿಯಾಗಿದ್ದರು. ಈ ಘಟನೆಗಳಲ್ಲಿ ಅನೇಕರು ಗಾಯಗೊಂಡಿದ್ದಾರೆ.

ಮಧ್ಯಪ್ರದೇಶ, ರಾಜಸ್ತಾನ, ಉತ್ತರ ಪ್ರದೇಶ, ಬಿಹಾರ, ಗುಜರಾತ್, ಒಡಿಶಾ ಮತ್ತು ಪಂಜಾಬ್ ರಾಜ್ಯಗಳಲ್ಲಿ ಹಿಂಸಾಚಾರ ನಡೆದಿದ್ದು. ಸರ್ಕಾರಿ ಬಸ್‍ಗಳೂ ಸೇರಿದಂತೆ ಹಲವು ವಾಹನಗಳು ಬೆಂಕಿಗಾಹುತಿಯಾಗಿವೆ. ಸಾರ್ವಜನಿಕ ಆಸ್ತಿ-ಪಾಸ್ತಿಗಳಿಗೆ ದುಷ್ಕರ್ಮಿಗಳು ಹಾನಿ ಮಾಡಿದ್ದಾರೆ.
ವಿವಿಧ ರಾಜ್ಯಗಳಲ್ಲಿ ಭಾರತ್ ಬಂದ್‍ನಿಂದಾಗಿ 150ಕ್ಕೂ ಹೆಚ್ಚು ರೈಲುಗಳ ಸಂಚಾರಕ್ಕೆ ಅಡಚಣೆಯಾಗಿತ್ತು.

Facebook Comments

Sri Raghav

Admin