‘ಚಾಮುಂಡೇಶ್ವರಿ, ವರುಣಾ ಕ್ಷೇತ್ರದಲ್ಲಿ ಅಪ್ಪ-ಮಗನನ್ನು ಮನೆಗೆ ಕಳುಹಿಸಲಿದ್ದಾರೆ ಮತದಾರರು’

ಈ ಸುದ್ದಿಯನ್ನು ಶೇರ್ ಮಾಡಿ

Siddaramaiah-vs-Kumaraswamyಮೈಸೂರು,ಏ.4-ಚಾಮುಂಡೇಶ್ವರಿ, ವರುಣಾ ಕ್ಷೇತ್ರದಿಂದ ಮತದಾರರು ಅಪ್ಪ-ಮಗನನ್ನು ಮನೆಗೆ ಕಳುಹಿಸಲಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಎಚ್‍ಡಿಕೆ ಇಂದಿಲ್ಲಿ ತಿಳಿಸಿದರು. ನಗರದ ಖಾಸಗಿ ಹೋಟೆಲ್‍ನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಜನರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಚಾಮುಂಡೇಶ್ವರಿ ಕ್ಷೇತ್ರದಿಂದಲೂ, ಅವರ ಪುತ್ರ ಯತೀಂದ್ರನನ್ನು ವರುಣಾದಿಂದ ಮನೆಗೆ ಕಳುಹಿಸಲಿದ್ದಾರೆ ಎಂದರು.

ಚಾಮುಂಡÉೀಶ್ವರಿ ಕ್ಷೇತ್ರ ಬಿಟ್ಟು ಹೋಗಿದ್ದ ಸಿದ್ದರಾಮಯ್ಯ ವರುಣಾಗೆ ಪಲಾಯನ ಮಾಡಿದ್ದರು. ಆದರೆ ಇದೀಗ ಮತ್ತೆ ಚಾಮುಂಡೇಶ್ವರಿ ಕ್ಷೇತ್ರಕ್ಕೆ ಬಂದಿದ್ದಾರೆಂದು ವ್ಯಂಗ್ಯವಾಡಿದರು. ಮಗನಿಗೆ ರಾಜಕೀಯ ಭವಿಷ್ಯ ರೂಪಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ವರುಣಾದಿಂದ ಚಾಮುಂಡೇಶ್ವರಿಗೆ ಬಂದಿದ್ದಾರೆಂದು ಟೀಕಿಸಿದರು. ಈ ಕ್ಷೇತ್ರದಲ್ಲಿ ಸಿದ್ಧರಾಮಯ್ಯ ಅವರು ಜಿಲ್ಲಾಧಿಕಾರಿಗಳ ಮೇಲೆ ಹಲ್ಲೆ ಮಾಡಿದ ಮರಿಗೌಡನನ್ನು ಬಾಡಿಗಾರ್ಡ್‍ನನ್ನಾಗಿ ಇಟ್ಟುಕೊಂಡಿದ್ದಾರೆಂದು ದೂರಿದರು.

ಒಕ್ಕಲಿಗ ಸಮಾಜದ ಕೆಲ ಮುಖಂಡರನ್ನು ನಮ್ಮ ವಿರುದ್ಧ ಬಿಟ್ಟು ಒಡೆದಾಳುವ ನೀತಿ ಅನುಸರಿಸುತ್ತಿದ್ದಾರೆಂದು ಮುಖ್ಯಮಂತ್ರಿ ವಿರುದ್ಧ ಎಚ್‍ಡಿಕೆ ಗಂಭೀರ ಆರೋಪ ಮಾಡಿದರು.
ನಾನಾಗಲಿ, ಜಿ.ಟಿ.ದೇವೇಗೌಡರಾಗಲಿ ಸಿದ್ದರಾಮಯ್ಯ ಅವರನ್ನು ಸೋಲಿಸುತ್ತೇವೆಂದು ಎಲ್ಲೂ ಹೇಳಿಲ್ಲ. ಜನರೇ ಅವರನ್ನು ಮನೆಗೆ ಕಳುಹಿಸುತ್ತಾರೆಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು. ಜಿಟಿಡಿ ಅವರ ಮೇಲೆ ಎಸಿಬಿ ಬಿಟ್ಟು ಗದಾಪ್ರಹಾರ ಮಾಡಿಸಿದ್ದರು. ಆಗ ಮಾತ್ರ ಸಿದ್ದು ವಿರುದ್ದ ಮಾತನಾಡಿದ್ದೆ ಎಂದು ಮತ್ತೊಂದು ಪ್ರಶ್ನೆಗೆ ಉತ್ತರಿಸಿದರು.

ನಂಜನಗೂಡು-ಗುಂಡ್ಲುಪೇಟೆ ಉಪಚುನಾವಣೆಯಲ್ಲಿ ರಾಜಕೀಯ ಕಾರಣಗಳಿಂದಾಗಿ ನಾವು ಅಭ್ಯರ್ಥಿಯನ್ನು ಕಣಕ್ಕಿಳಿಸಿರಲಿಲ್ಲ ಎಂದರು. ಉಪಚುನಾವಣೆಯಲ್ಲಿ ಗೆದ್ದಿರುವುದು ಸಿಎಂ ಅವರ ಸರ್ಕಾರದ ಆಡಳಿತದಿಂದಲ್ಲ , ವಾಮಮಾರ್ಗದ ಮೂಲಕ ಅವರು ಜಯ ಗಳಿಸಿದ್ದಾರೆ ಎಂದು ಹೇಳಿದರು.
ಕಾಂಗ್ರೆಸ್ ಪಕ್ಷದ ಹಲವು ಮಂದಿ ಜೆಡಿಎಸ್ ಪಕ್ಷಕ್ಕೆ ಸೇರ್ಪಡೆಯಾಗಲಿದ್ದಾರೆ ಎಂದರು.

Facebook Comments

Sri Raghav

Admin