ಮೈಸೂರು ಜಿಲ್ಲಾ ನ್ಯಾಯಾಲಯದಲ್ಲಿ ಬೆರಳಚ್ಚುಗಾರರ ಹುದ್ದೆಗಳ ನೇಮಕಾತಿ

ಈ ಸುದ್ದಿಯನ್ನು ಶೇರ್ ಮಾಡಿ

mysur-Distric-Court
ಮೈಸೂರಿನ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದಲ್ಲಿ ಬೆರಳಚ್ಚುಗಾರರ ಹುದ್ದೆಗಳ ನೇರ ನೇಮಕಾತಿಗೆ ಅರ್ಹ ಅಭ್ಯರ್ಥಿಗಳಿಂದ ಆನ್ ಲೈನ್ ಮೂಲಕ ಅರ್ಜಿ ಅಹ್ವಾನಿಸಲಾಗಿದೆ.

ಹುದ್ದೆಗಳ ಸಂಖ್ಯೆ : 12
ಹುದ್ದೆಗಳ ವಿವರ
ಬೆರಳಚ್ಚುಗಾರರ ಹುದ್ದೆ
ವಿದ್ಯಾರ್ಹತೆ : ಎಸ್ ಎಸ್ ಎಲ್ ಸಿ ಯಲ್ಲಿ ಉತ್ತೀರ್ಣರಾಗಿರಬೇಕು. ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ನಡೆಸುವ ಕನ್ನಡ ಮತ್ತು ಆಂಗ್ಲ ಹಿರಿಯ ಶ್ರೇಣಿ ಬೆರಳಚ್ಚು ಅಥವಾ ಇದ್ದೆಕ್ಕೆ  ಸಮನಾದ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು.
ವಯೋಮಿತಿ : ಸಾಮಾನ್ಯ ವರ್ಗದವರಿಗೆ 18 ರಿಂದ 35 ವರ್ಷ ವಯೋಮಿತಿ ನಿಗದಿ ಮಾಡಲಾಗಿದೆ. 2ಎ, 2ಬಿ, 3ಎ, 3ಬಿ ವರ್ಗದ ಅಭ್ಯರ್ಥಿಗಳಿಗೆ 38 ವರ್ಷ, ಪ.ಜಾ, ಪ.ಪ, ಪ್ರ-1ರ ಅಭ್ಯರ್ಥಿಗಳಿಗೆ 40 ವರ್ಷದವರೆಗೆ ವಯೋಮಿತಿಯಲ್ಲಿ ಸಡಿಲತೆ ನೀಡಲಾಗಿದೆ.
ಶುಲ್ಕ : ಸಾಮಾನ್ಯ ವರ್ಗದವರಿಗೆ 200 ರೂ, ಪ್ರ-2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳಿಗೆ 100 ರೂ, ಪ.ಜಾ, ಪ.ಪಂ ಮತ್ತು ಪ್ರ-1 ವರ್ಗದವರಿಗೆ ಶುಲ್ಕದಿಂದ ವಿನಾಯ್ತಿ ನೀಡಲಾಗಿದೆ.
ಅರ್ಜಿ ಸಲ್ಲಿಸಲು ಕಡೆಯ ದಿನಾಂಕ : 15-05-2018
ಹೆಚ್ಚಿನ ಮಾಹಿತಿಗಾಗಿ ಮತ್ತು ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಲು ವೆಬ್ ಸೈಟ್ ವಿಳಾಸ  http://ecourts.gov.in/india/karnataka/mysuru/recruitment  ಗೆ ಭೇಟಿ ನೀಡಿ.

ಅಧಿಸೂಚನೆಗಾಗಿ ಇಲ್ಲಿ ಕ್ಲಿಕ್ಕಿಸಿ

Facebook Comments

Sri Raghav

Admin