ಸಿದ್ದಗಂಗಾ ಶ್ರೀಗಳ ಆಶೀರ್ವಾದ ಪಡೆದ ರಾಹುಲ್, ಸ್ವಾಮೀಜಿ ಜೊತೆ ಚರ್ಚೆ (Video)

ಈ ಸುದ್ದಿಯನ್ನು ಶೇರ್ ಮಾಡಿ

ತುಮಕೂರು, ಏ. 4: ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಇಂದು (ಬುಧವಾದ) ಸಿದ್ದಗಂಗಾ ಮಠಕ್ಕೆ ಭೇಟಿನೀಡಿ ಶ್ರೀ ಶಿವಕುಮಾರ ಸ್ವಾಮೀಜಿ ಅವರಿಗೆ 111ನೇ ಜನ್ಮದಿನೋತ್ಸವದ ಗುರುವಂದನೆ ಸಲ್ಲಿಸಿ, ಆಶೀರ್ವಾದ ಪಡೆದರು. ನಂತರ ಅರ್ಧ ಗಂಟೆಗೂ ಹೆಚ್ಚು ಕಾಲ ಸ್ವಾಮೀಜಿ ಜತೆ ಮಾತುಕತೆ ನಡೆಸಿದರು. ಇದೇ ಸಂದರ್ಭದಲ್ಲಿ ಕಾಂಗ್ರೆಸ್ ನಾಯಕ ಮಲ್ಲಿಕಾರ್ಜುನ ಖರ್ಗೆ, ಮುಖ್ಯಮಂತ್ರಿ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ, ಸಚಿವ ಟಿ.ಬಿ.ಜಯಚಂದ್ರ ಅವರು ರಾಹುಲ್ ಗಾಂಧಿಗೆ ಸಾಥ್ ನೀಡಿದರು.

ಈ ವೇಳೆ ರಾಹುಲ್ ಮಠಕ್ಕೆ ಆಗಮಿಸುತ್ತಿದ್ದುದರಿಂದ ಭಾರಿ ಪೊಲೀಸ್ ಬಂದೋಬಸ್ ಮಾಡಲಾಗಿತ್ತು. ಒಂದು ರೀತಿ ಅಘೋಷಿತ ಕರ್ಫ್ಯೂ ಜಾರಿಗೊಳಿಸಿದಂತಾಗಿತ್ತು. ಪೊಲೀಸರು ಕಾನೂನು ದುರುಪಯೋಗ ಮಾಡಿಕೊಂಡು ನಾಗರಿಕರಿಗೆ ತೊಂದರೆ ಕೊಡುತ್ತಿದ್ದಾರೆ ಎಂದು ಕೆಲವರು ಆಕ್ರೋಶ ವ್ಯಕ್ತಪಡಿಸಿದರು. ಸಿಟ್ಟಿಗೆದ್ದ ಸಾರ್ವಜನಿಕರು ವಾಗ್ವಾದಕ್ಕಿಳಿದ ದೃಶ್ಯ ಕಂಡುಬಂತು.

Shivakumar-shree

Facebook Comments

Sri Raghav

Admin