ಮಹಿಳಾ ಶೌಚಾಲಯ ಬಳಸಿದ್ದ ‘ಪೊಲಿ’ಸಪ್ಪನ ವಿರುದ್ಧ ಕ್ರಮ

ಈ ಸುದ್ದಿಯನ್ನು ಶೇರ್ ಮಾಡಿ

Police-Toilet--01

ಮೈಸೂರು, ಏ.6- ಮಹಿಳಾ ಶೌಚಾಲಯ ಬಳಸಿದ್ದ ಪೊಲೀಸ್ ಅಧಿಕಾರಿಯ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ನಗರ ಪೊಲೀಸ್ ಆಯುಕ್ತ ಎ.ಸುಬ್ರಹ್ಮಣ್ಯೇಶ್ವರ ರಾವ್ ತಿಳಿಸಿದ್ದಾರೆ. ಮೈಸೂರು ಗ್ರಾಮಾಂತರ ಬಸ್ ನಿಲ್ದಾಣದಲ್ಲಿ ಪೊಲೀಸ್ ಅಧಿಕಾರಿಯೊಬ್ಬರು ಮಹಿಳಾ ಶೌಚಾಲಯಕ್ಕೆ ತೆರಳಿದ್ದರು.  ಸಂಚಾರಿ ಪೊಲೀಸ್ ಠಾಣೆ ಪೊಲೀಸರೊಬ್ಬರು ಮಹಿಳಾ ಶೌಚಾಲಯಕ್ಕೆ ತೆರಳಿದ್ದನ್ನು ಅಲ್ಲಿನ ಸಿಬ್ಬಂದಿ ಮತ್ತು ಸಾರ್ವಜನಿಕರು ಪ್ರಶ್ನಿಸಿದಾಗ ಉಡಾಫೆ ಉತ್ತರ ನೀಡಿದ್ದರು. ಕೆಲವರು ಅದನ್ನು ಚಿತ್ರೀಕರಿಸಿ ಸಾಮಾಜಿಕ ಜಾಲತಾಣಗಳಲ್ಲಿ ಹಾಕಿದ್ದಾರೆ. ಇದು ವೈರಲ್ ಆದ ಹಿನ್ನೆಲೆಯಲ್ಲಿ ಪೊಲೀಸ್ ಆಯುಕ್ತರು ಈ ಬಗ್ಗೆ ಪ್ರತಿಕ್ರಿಯಿಸಿ ಘಟನೆಯ ಮಾಹಿತಿ ಪಡೆದು ತಪ್ಪಿತಸ್ಥ ಪೊಲೀಸ್ ವಿರುದ್ಧ ಕ್ರಮ ಕೈಗೊಳ್ಳುವುದಾಗಿ ತಿಳಿಸಿದ್ದಾರೆ.

Facebook Comments

Sri Raghav

Admin