ಸಿದ್ದರಾಮಯ್ಯನವರೇ ಮುಂದಿನ ಮುಖ್ಯಮಂತ್ರಿ : ರಾಹುಲ್ ಸುಳಿವು

ಈ ಸುದ್ದಿಯನ್ನು ಶೇರ್ ಮಾಡಿ

Rahul-CM--01

ಬೆಂಗಳೂರು, ಏ.8-ರಾಜ್ಯದಲ್ಲಿ ಉತ್ತಮ ಆಡಳಿತ ನಡೆಸಿರುವ ಕಾಂಗ್ರೆಸ್ ಸರ್ಕಾರ ರಾಜ್ಯದಲ್ಲಿ ಮತ್ತೆ ಅಧಿಕಾರಕ್ಕೆ ಬರುವುದು ನಿಶ್ಚಿತ. ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮತ್ತೆ ಮುಖ್ಯಮಂತ್ರಿಯಾಗುತ್ತಾರೆ ಎಂದು ಎಐಸಿಸಿ ಅಧ್ಯಕ್ಷ ರಾಹುಲ್‍ಗಾಂಧಿ ಪರೋಕ್ಷ ಮುನ್ಸೂಚನೆ ನೀಡಿದರು.
ಅಶೋಕ ಹೊಟೇಲ್‍ನಲ್ಲಿ ಪತ್ರಕರ್ತರೊಂದಿಗೆ ಉಪಹಾರ ಕೂಟ ಸಂದರ್ಭದಲ್ಲಿ ಅನೌಪಚಾರಿಕವಾಗಿ ಮಾತನಾಡಿದ ಅವರು, ರಾಜ್ಯದಲ್ಲಿ ಕಾಂಗ್ರೆಸ್ ಮತ್ತೆ ಅಧಿಕಾರಕ್ಕೆ ಬಂದರೆ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಮತ್ತೆ ರಾಜ್ಯದ ಅಧಿಕಾರದ ಚುಕ್ಕಾಣಿ ಹಿಡಿಯುವುದು ಸಹಜ ಎಂದು ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದರು.

ನಮ್ಮ ಸರ್ಕಾರಕ್ಕೆ ಆಡಳಿತ ವಿರೋಧಿ ಅಲೆ ಇಲ್ಲ. ಸಿದ್ದರಾಮಯ್ಯನವರ ನೇತೃತ್ವದಲ್ಲೇ ಚುನಾವಣೆ ಎದುರಿಸುತ್ತಿದ್ದೇವೆ. ಅವರ ನಾಯಕತ್ವವನ್ನು ರಾಜ್ಯದ ಜನ ಒಪ್ಪಿಕೊಂಡಿದ್ದಾರೆ. ಯಶಸ್ವಿಯಾಗಿ ಆಡಳಿತ ನಡೆಸಿದ್ದಾರೆ. ಮತ್ತೆ ಅಧಿಕಾರಕ್ಕೆ ಬರುವುದರಲ್ಲಿ ಯಾವುದೇ ಅನುಮಾನವಿಲ್ಲ. ಅಧಿಕಾರಕ್ಕೆ ಬಂದರೆ ಸಹಜವಾಗಿಯೇ ಅವರು ಸಿಎಂ ಎಂದು ಹೇಳಿದರು. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಈ ಹಿಂದೆ ಪ್ರಚಾರದ ವೇಳೆ ನಾನೇ ಮುಖ್ಯಮಂತ್ರಿ ಎಂದು ಹೇಳುತ್ತಿದ್ದರು. ಈಗ ನಿಲ್ಲಿಸಿದ್ದಾರೆ. ಇದಕ್ಕೆ ಕಾರಣವೇನು ಎಂದು ಪತ್ರಕರ್ತರು ಕೇಳಿದ ಪ್ರಶ್ನೆಗೆ ಎಲ್ಲವನ್ನೂ ಪತ್ರಕರ್ತರ ಮುಂದೆ ತೆರೆದಿಡುವುದಕ್ಕೆ ಆಗುವುದಿಲ್ಲ ಎಂದು ಮಾರ್ಮಿಕವಾಗಿ ರಾಹುಲ್ ಹೇಳಿದರು. ಈ ಸಂದರ್ಭದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ರಾಹುಲ್‍ಗಾಂಧಿ ಎದುರುಗಡೆಯೇ ಇದ್ದರು.

Facebook Comments
( ಎಚ್ಚರಿಕೆ..! : ಈ ಸಂಜೆ ಸುದ್ದಿಗಳನ್ನು ನಕಲು ಮಾಡುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುತ್ತಿದೆ )

Sri Raghav

Admin