ಭೈರತಿ ಸುರೇಶ್ ರಾಜೀನಾಮೆ ಅಂಗೀಕಾರ

ಈ ಸುದ್ದಿಯನ್ನು ಶೇರ್ ಮಾಡಿ

bhairati-suresh-1
ಬೆಂಗಳೂರು,ಏ.9-ವಿಧಾನಪರಿಷತ್ ಸದಸ್ಯ ಭೈರತಿ ಸುರೇಶ್ ನೀಡಿರುವ ರಾಜೀನಾಮೆ ಅಂಗೀಕರಿಸಿರುವುದಾಗಿ ಸಭಾಪತಿ ಡಿ.ಎಚ್.ಶಂಕರಮೂರ್ತಿ ತಿಳಿಸಿದರು.  ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನಿನ್ನೆ ತಮ್ಮ ಮನೆಗೆ ಬಂದು ಭೈರತಿ ಸುರೇಶ್ ಅವರು ರಾಜೀನಾಮೆ ಸಲ್ಲಿಸಿ ಕೂಡಲೇ ಅಂಗೀಕರಿಸುವಂತೆ ಮನವಿ ಮಾಡಿದ್ದರು. ಪತ್ರ ಸರಿಯಿದ್ದ ಹಿನ್ನೆಲೆಯಲ್ಲಿ ಅದನ್ನು ಅಂಗೀಕರಿಸಲಾಗಿದೆ ಎಂದರು.  ಪಕ್ಷೇತರ ಸದಸ್ಯರಲ್ಲಿ ಪರಿಷತ್‍ಗೆ ಆಯ್ಕೆಯಾಗಿದ್ದ ಅವರು, ಮೂರು ತಿಂಗಳಲ್ಲಿ ನಿವೃತ್ತಿಯಾಗುತ್ತಿದ್ದರು. ಬೇರೊಂದು ಪಕ್ಷದ ಮೂಲಕ ಚುನಾವಣೆಗೆ ಸ್ಪರ್ಧಿಸುವ ಹಿನ್ನೆಲೆಯಲ್ಲಿ ರಾಜೀನಾಮೆ ನೀಡಿರಬಹುದು ಎಂದು ಹೇಳಿದರು.

Facebook Comments

Sri Raghav

Admin