ಖೇಣಿಗೆ ಬೀದರ್ ದಕ್ಷಿಣ ಕ್ಷೇತ್ರದ ಟಿಕೆಟ್ ‘ಕೈ’ತಪ್ಪುವ ಸಾಧ್ಯತೆ

ಈ ಸುದ್ದಿಯನ್ನು ಶೇರ್ ಮಾಡಿ

Ashok-Kheni--04
ಬೆಂಗಳೂರು, ಏ.13-ತೀವ್ರ ವಿರೋಧದ ಹಿನ್ನೆಲೆಯಲ್ಲಿ ಅಶೋಕ್ ಖೇಣಿಗೆ ಬೀದರ್ ದಕ್ಷಿಣ ಕ್ಷೇತ್ರದ ಟಿಕೆಟ್ ಕೈತಪ್ಪುವ ಸಾಧ್ಯತೆ ಇದೆ. ಬೀದರ್ ದಕ್ಷಿಣ ಕ್ಷೇತ್ರದ ಟಿಕೆಟ್ ಆಕಾಂಕ್ಷಿಯಾಗಿದ್ದ ಖೇಣಿ ಅವರಿಗೆ ಬೇರೆ ಕ್ಷೇತ್ರದಿಂದ ಟಿಕೆಟ್ ನೀಡುವಂತೆ ಕಾಂಗ್ರೆಸ್ ಹಿರಿಯ ಮುಖಂಡ ಮಲ್ಲಿಕಾರ್ಜುನ ಖರ್ಗೆ ಅವರ ಒತ್ತಡದ ಹಿನ್ನೆಲೆಯಲ್ಲಿ ಖೇಣಿ ಅವರಿಗೆ ಟಿಕೆಟ್ ಕೈತಪ್ಪುವ ಸಾಧ್ಯತೆ ಹೆಚ್ಚಾಗಿದೆ.

ಬೀದರ್ ದಕ್ಷಿಣ ಕ್ಷೇತ್ರದಲ್ಲಿ ಧರ್ಮಸಿಂಗ್ ಅವರ ಅಳಿಯ ಚಂದ್ರಸಿಂಗ್ ಅವರು ಸತತ ಪ್ರಯತ್ನ ನಡೆಸಿದ್ದರು. ಅವರ ಪರವಾಗಿ ಖರ್ಗೆ ಅವರು ಹೈಕಮಾಂಡ್ ಮೇಲೆ ಒತ್ತಡ ಹಾಕಿದ್ದರು. ಖರ್ಗೆ ಅವರ ಒತ್ತಡ ಹೆಚ್ಚಾದ ಹಿನ್ನೆಲೆಯಲ್ಲಿ ದಕ್ಷಿಣ ಕ್ಷೇತ್ರದಲ್ಲಿ ಚಂದ್ರಸಿಂಗ್ ಅವರಿಗೆ ಟಿಕೆಟ್ ಸಿಗುವ ಸಾಧ್ಯತೆ ಇದೆ. ಹಾಗಾಗಿ ಖೇಣಿ ಅವರು ಬಸವ ಕಲ್ಯಾಣದಿಂದ ಕಣಕ್ಕಿಳಿಯುವ ಸಾಧ್ಯತೆ ಇದೆ ಎಂದು ತಿಳಿದುಬಂದಿದೆ.

Facebook Comments

Sri Raghav

Admin