ದೆಹಲಿಯ ನಾಲ್ಕಂತಸ್ತಿನ ಕಟ್ಟಡವೊಂದರಲ್ಲಿ ಅಗ್ನಿ ದುರಂತ, ಒಂದೇ ಕುಟುಂಬದ ನಾಲ್ವರ ಸಾವು

ಈ ಸುದ್ದಿಯನ್ನು ಶೇರ್ ಮಾಡಿ

Delhi-Fire--01

ನವದೆಹಲಿ, ಏ.13-ರಾಜಧಾನಿ ದೆಹಲಿಯ ನಾಲ್ಕು ಅಂತಸ್ತಿನ ಕಟ್ಟಡವೊಂದರಲ್ಲಿ ಇಂದು ಮುಂಜಾನೆ ಸಂಭವಿಸಿದ ಬೆಂಕಿ ದುರಂತದಲ್ಲಿ ಒಂದೇ ಕುಟುಂಬದ ನಾಲ್ವರು ಮೃತಪಟ್ಟು, ಇತರ ಮೂವರು ತೀವ್ರ ಗಾಯಗೊಂಡಿದ್ದಾರೆ. ದೆಹಲಿಯ ಕೊಹಟ್ ಎನ್‍ಕ್ಲೇವ್‍ನ ಕಟ್ಟಡದ ವಾಹನ ನಿಲುಗಡೆ ಸ್ಥಳದಲ್ಲಿ ಇಂದು 2.48ರಲ್ಲಿ ಕಾಣಿಸಿಕೊಂಡ ಬೆಂಕಿಯಿಂದ ದಟ್ಟ ಹೊಗೆ ಆವರಿಸಿತು. ಇದರಿಂದಾಗಿ ಮೊದಲ ಮಹಡಿಯಲ್ಲಿ ಮಲಗಿದ್ದ ಇಬ್ಬರು ಮಕ್ಕಳೂ ಸೇರಿ ಒಂದೇ ಕುಟುಂಬದ ನಾಲ್ವರು ಉಸಿರುಗಟ್ಟಿ ಮೃತಪಟ್ಟರು ಎಂದು ಅಗ್ನಿಶಾಮಕ ದಳದ ಉನ್ನತಾಧಿಕಾರಿಯೊಬ್ಬರು ತಿಳಿಸಿದ್ದಾರೆ.

ಸುದ್ದಿ ತಿಳಿದ ಕೂಡಲೇ 2.48ರ ನಸುಕಿನಲ್ಲಿ ಅಗ್ನಿಶಾಮಕ ವಾಹನಗಳೊಂದಿಗೆ ಸ್ಥಳಕ್ಕೆ ಧಾವಿಸಿದ ಸಿಬ್ಬಂದಿ ಮುಂಜಾನೆ 4 ಗಂಟೆಗೆ ಬೆಂಕಿಯನ್ನು ನಂದಿಸುವಲ್ಲಿ ಸಫಲರಾದರು. ಮೊದಲ ಮಹಡಿಯಲ್ಲಿ ಮಲಗಿದ್ದ ಮಂದಿಗೆ ದಟ್ಟ ಹೊಗೆ ಆವರಿಸಿದ್ದರಿಂದ ಎಚ್ಚರಗೊಂಡು ತಪ್ಪಿಸಿಕೊಳ್ಳಲು ಯತ್ನಿಸಿದರಾದರೂ ಉಸಿರುಗಟ್ಟಿ ಮೃತಪಟ್ಟರು ಎಂದು ಅವರು ಹೇಳಿದ್ದಾರೆ. ಈ ಘಟನೆಯಲ್ಲಿ ಮೂವರು ಗಾಯಗೊಂಡಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

Facebook Comments

Sri Raghav

Admin