ಷಡಕ್ಷರಿಗೆ ‘ಕೈ’ತಪ್ಪಿದ ಟಿಕೆಟ್, ಬೆಂಬಲಿಗರಿಂದ ತಿಪಟೂರು ಬಂದ್

ಈ ಸುದ್ದಿಯನ್ನು ಶೇರ್ ಮಾಡಿ

shadakshari--01

ತಿಪಟೂರು,ಏ.16- ಷಡಕ್ಷರಿಗೆ ಕೈ ಟಿಕೆಟ್ ತಪ್ಪಿದ ಹಿನ್ನೆಲೆಯಲ್ಲಿ ಬೆಂಬಲಿಗರು ಮತ್ತು ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿ ತಿಪಟೂರು ಬಂದ್ ನಡೆಸಿದರು. ಷಡಕ್ಷರಿ ಅವರಿಗೆ ಟಕೆಟ್ ದೊರೆಯುತ್ತದೆ ಎಂಬ ನಿರೀಕ್ಷೆಯಲ್ಲಿದ್ದ ಕಾರ್ಯಕರ್ತರು, ಮುಖಂಡರು ರಾತ್ರಿ ಪಟ್ಟಿ ಪ್ರಕಟವಾಗುತ್ತಿದ್ದಂತೆ ಷಡಕ್ಷರಿ ಅವರ ಹೆಸರು ಪಟ್ಟಿಯಲ್ಲಿ ಇಲ್ಲದಿರುವುದಕ್ಕೆ ಭಾರೀ ಆಕ್ರೋಶ ವ್ಯಕ್ತಪಡಿಸಿದರು.

ತಾಲ್ಲೂಕಿನಲ್ಲಿ ಶಾಸಕರಾಗಿ ಹಲವು ಜನಪರ ಕಾರ್ಯಗಳನ್ನು ಮಾಡಿಕೊಂಡು ಜನಮನ್ನಣೆ ಗಳಿಸಿದ್ದರು. ಆದರೆ ಏಕಾಕಿ ನಂಜಾಮರಿ ಅವರಿಗೆ ಕಾಂಗ್ರೆಸ್ ಟಿಕೆಟ್ ನೀಡಿದ್ದು , ಸ್ಥಳೀಯರಲ್ಲಿ ಆಕ್ರೋಶಕ್ಕೆ ಕಾರಣವಾಗಿದೆ. ಈ ಹಿನ್ನೆಲೆಯಲ್ಲಿ ಇದರಿಂದ ರೊಚ್ಚಿಗೆದ್ದ ಕಾರ್ಯಕರ್ತರು, ಬೆಂಬಲಿಗರು ಇಂದು ತಿಪಟೂರು ಬಂದ್‍ಗೆ ಕರೆ ನೀಡಿ ತಮ್ಮ ಆಕ್ರೋಶ ವ್ಯಕ್ತಪಡಿಸಿದರು.

Facebook Comments

Sri Raghav

Admin