ಏ.26 ರಿಂದ ಮೂರು ಹಂತದಲ್ಲಿ ಮತ್ತೆ ರಾಹುಲ್ ಪ್ರಚಾರ

ಈ ಸುದ್ದಿಯನ್ನು ಶೇರ್ ಮಾಡಿ

Rahul--01
ಬೆಂಗಳೂರು, ಏ.17-ಈಗಾಗಲೇ ಜನಾಶೀರ್ವಾದ ಯಾತ್ರೆ ಮೂಲಕ ರಾಜ್ಯಾದ್ಯಂತ ಪ್ರವಾಸ ಮಾಡಿದ್ದ ಎಐಸಿಸಿ ಅಧ್ಯಕ್ಷ ರಾಹುಲ್‍ಗಾಂಧಿ ಮತ್ತೆ ಮೂರು ಹಂತದಲ್ಲಿ ಕರ್ನಾಟಕ ಪ್ರವಾಸ ಕೈಗೊಳ್ಳಲು ಮುಂದಾಗಿದ್ದಾರೆ. ಏ.26 ರಿಂದ ರಾಹುಲ್‍ಗಾಂಧಿಯವರು ರಾಜ್ಯ ಪ್ರವಾಸ ಆರಂಭಿಸಲಿದ್ದು, ಅಂದು ಹಾವೇರಿ, ಗದಗ ಜಿಲ್ಲೆಯಲ್ಲಿ ಪ್ರವಾಸ ಮಾಡಲಿದ್ದಾರೆ. ಏ.26 ರಂದು ಕೊಡಗು, ಉತ್ತರ ಕನ್ನಡ ಜಿಲ್ಲೆಯಲ್ಲಿ ಮೇ 3 ಮತ್ತು 4 ರಂದು ಮತ್ತು 8,9 ಹಾಗೂ 10 ರಂದು ವಿವಿಧ ಜಿಲ್ಲೆಯಲ್ಲಿ ರಾಹುಲ್ ಪ್ರಚಾರ ಮಾಡಲಿದ್ದು, ಮೇ 10 ರಂದು ಬೆಳಗಾವಿಯಲ್ಲಿ ಬೃಹತ್ ಸಮಾವೇಶ ಉದ್ದೇಶಿಸಿ ಮಾತನಾಡಲಿದ್ದಾರೆ. ಆ ಸಂದರ್ಭದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಪರಮೇಶ್ವರ್, ಲೋಕಸಭೆ ನಾಯಕ ಮಲ್ಲಿಕಾರ್ಜುನ ಖರ್ಗೆ ಪಾಲ್ಗೊಳ್ಳಲಿದ್ದಾರೆ.

Facebook Comments

Sri Raghav

Admin