ಕಾಶ್ಮೀರದ ಶೋಪಿಯಾನ್ ಜಿಲ್ಲೆಯಲ್ಲಿ ಉಗ್ರರ ದಾಳಿ : ಯೋಧ ಸೇರಿ ಕೆಲವರಿಗೆ ಗಾಯ

ಈ ಸುದ್ದಿಯನ್ನು ಶೇರ್ ಮಾಡಿ

Kashmir--01

ಶ್ರೀನಗರ, ಏ.17-ಕಾಶ್ಮೀರ ಕಣಿವೆಯಲ್ಲಿ ಯೋಧರು ಮತ್ತು ನಾಗರಿಕರನ್ನು ಗುರಿಯಾಗಿಟ್ಟುಕೊಂಡು ಉಗ್ರರು ದಾಳಿ ಮುಂದುವರಿಸಿದ್ದಾರೆ. ಜಮ್ಮು ಮತ್ತು ಕಾಶ್ಮೀರದ ಶೋಪಿಯಾನ್ ಜಿಲ್ಲೆಯಲ್ಲಿ ಭಯೋತ್ಪಾದಕರು ನಡೆಸಿದ ದಾಳಿಯಲ್ಲಿ ಯೋಧ ಸೇರಿದಂತೆ ಕೆಲವು ನಾಗರಿಕರು ಗಾಯಗೊಂಡಿದ್ದಾರೆ.
ಭಯೋತ್ಪಾದಕರ ಆಕ್ರಮಣದಲ್ಲಿ ಯೋಧ ಬಿಲಾಲ್ ಅಹಮದ್ ಹಾಗೂ ನಾಗರಿಕ ರಫೀಕ್ ಸೇರಿದಂತೆ ಕೆಲವರಿಗೆ ಗಾಯಗಳಾಗಿವೆ ಎಂದು ಜಮ್ಮು ಮತ್ತು ಕಾಶ್ಮೀರದ ಪೊಲೀಸ್ ವಕ್ತಾರರು ಹೇಳಿದ್ದಾರೆ. ಗಾಯಾಳುಗಳಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದೆ.  ಇದು ಪಾಕಿಸ್ತಾನದ ನಿಷೇಧಿತ ಹಿಜ್‍ಬುಲ್ ಮುಜಾಹಿದ್ದೀನ್ ಸಂಘಟನೆಯ ಉಗ್ರರ ಕೃತ್ಯ ಎಂದು ತನಿಖೆಯಿಂದ ತಿಳಿದು ಬಂದಿದೆ. ಆ ಪ್ರದೇಶದಲ್ಲಿ ಅಡಗಿರಬಹುದಾದ ಭಯೋತ್ಪಾದಕರಿಗಾಗಿ ಶೋಧ ಮುಂದುವರಿದಿದೆ.

Facebook Comments

Sri Raghav

Admin