ಬಿಬಿಎಂಪಿ ಮಾಜಿ ಉಪಮೇಯರ್, ಕಾಂಗ್ರೆಸ್‍ನ ಹಿರಿಯ ಮುಖಂಡ ಪುಟ್ಟರಾಜು ಜೆಡಿಎಸ್’ಗೆ

ಈ ಸುದ್ದಿಯನ್ನು ಶೇರ್ ಮಾಡಿ

Purttaraju--01

ಬೆಂಗಳೂರು, ಏ.17-ಮಾಜಿ ಉಪಮೇಯರ್ ಹಾಗೂ ಕಾಂಗ್ರೆಸ್‍ನ ಹಿರಿಯ ಮುಖಂಡ ಪುಟ್ಟರಾಜು ಅವರು ಜೆಡಿಎಸ್ ಸೇರುವುದು ಬಹುತೇಕ ಖಚಿತವಾಗಿದೆ. ವಿ.ಸೋಮಣ್ಣ ಅವರ ಆಪ್ತ ಬಳಗದಲ್ಲಿ ಗುರುತಿಸಿಕೊಂಡಿದ್ದ ಪುಟ್ಟರಾಜು ಅವರು ಬದಲಾದ ಸನ್ನಿವೇಶದಲ್ಲಿ ಕಾಂಗ್ರೆಸ್ ಸೇರ್ಪಡೆಯಾಗಿದ್ದರು. ಪ್ರಸ್ತುತ ಕಾಂಗ್ರೆಸ್‍ನಲ್ಲಿನ ಕೆಲ ವಿದ್ಯಮಾನಗಳಿಂದ ಬೇಸತ್ತು ಅವರು ಜೆಡಿಎಸ್‍ಗೆ ಸೇರುತ್ತಿದ್ದಾರೆ.  ಇಂದು ಅಥವಾ ನಾಳೆ ಅವರು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರನ್ನು ಭೇಟಿ ಮಾಡಿ ಮಾತುಕತೆ ನಡೆಸಲಿದ್ದು, ಮೂಲಗಳ ಪ್ರಕಾರ ರಾಜಾಜಿನಗರ ವಿಧಾನಸಭಾ ಕ್ಷೇತ್ರದಿಂದ ಜೆಡಿಎಸ್ ಅಭ್ಯರ್ಥಿಯಾಗಿ ಕಣಕ್ಕಿಳಿಯುವ ಸಾಧ್ಯತೆ ಇದೆ ಎಂದು ತಿಳಿದುಬಂದಿದೆ.

ಈಗಾಗಲೇ ಒಂದು ಸುತ್ತಿನ ಮಾತುಕತೆ ನಡೆಸಲಾಗಿದ್ದು, ಬಹುತೇಕ ಅವರಿಗೆ ಜೆಡಿಎಸ್ ಟಿಕೆಟ್ ಖಚಿತ ಎಂದು ಹೇಳಲಾಗುತ್ತಿದೆ. ಈ ನಡುವೆ ಕಾಂಗ್ರೆಸ್‍ನ ಕೆಲ ನಾಯಕರ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿರುವ ಪುಟ್ಟರಾಜು ಅವರು ಈ ಸಂಜೆಯೊಂದಿಗೆ ಮಾತನಾಡಿ, ತಾವು ಪಕ್ಷ ತೊರೆಯುತ್ತಿರುವುದನ್ನು ಸ್ಪಷ್ಟಪಡಿಸಿದ್ದಾರೆ ಮತ್ತು ಜೆಡಿಎಸ್ ಸೇರುವುದನ್ನು ಕೂಡ ಖಚಿತಪಡಿಸಿದ್ದಾರೆ.

Facebook Comments

Sri Raghav

Admin