ಸಾಗರದಲ್ಲಿ ಭಿನ್ನಮತ ಸ್ಫೋಟ : ಬೇಳೂರು ಬೆಂಬಲಿಗರ ಪ್ರತಿಭಟನೆ

ಈ ಸುದ್ದಿಯನ್ನು ಶೇರ್ ಮಾಡಿ

Beluru-Gopalakrishna
ಬೆಂಗಳೂರು, ಏ.17- ಸಾಗರದಲ್ಲಿ ಬಿಜೆಪಿ ಭಿನ್ನಮತ ಸ್ಫೋಟಗೊಂಡಿದ್ದು , ಅಭ್ಯರ್ಥಿ ಆಕಾಂಕ್ಷಿ ಬೇಳೂರು ಗೋಪಾಲಕೃಷ್ಣ ಬೆಂಬಲಿಗರು ಇಂದು ಬೃಹತ್ ಪ್ರತಿಭಟನೆ ನಡೆಸಿದರು. ಸಾಗರದ ಆನಂದಪುರ, ಎಡೇನಹಳ್ಳಿ ವೃತ್ತದಲ್ಲಿ ಬಿಜೆಪಿ ಕಾರ್ಯಕರ್ತರು, ಬೇಳೂರು ಗೋಪಾಲಕೃಷ್ಣ ಬೆಂಬಲಿಗರು ಪ್ರತಿಭಟನೆ ನಡೆಸಿ ಪಕ್ಷದ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಹಾಗೂ ಹರತಾಳು ಹಾಲಪ್ಪ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದ ಬೇಳೂರು ಗೋಪಾಲಕೃಷ್ಣ ಮಾತನಾಡಿ, ನನಗೆ ಅನ್ಯಾಯವಾಗಿದೆ ಎಂದು ಬೇಸರ ವ್ಯಕ್ತಪಡಿಸಿದರು. ಸಮೀಕ್ಷೆಯಲ್ಲಿ ನನ್ನ ಹೆಸರು ಮುಂಚೂಣಿಯಲ್ಲಿದೆ. ನನ್ನ ಪರ ಅಲೆ ಇದೆ. ಹಾಗಾಗಿ ಟಿಕೆಟ್ ನನಗೇ ಸಿಗುತ್ತದೆ ಎಂದು ಮುಖಂಡರು ಹೇಳಿದ್ದರು. ಇದನ್ನು ನಂಬಿ ಪ್ರಚಾರದಲ್ಲೂ ತೊಡಗಿಕೊಂಡಿದ್ದೆ. ಆದರೆ ಎರಡನೆ ಪಟ್ಟಿಯಲ್ಲೂ ನನಗೆ ಟಿಕೆಟ್ ನೀಡಿಲ್ಲ ಎಂದು ದೂರಿದರು.
ಮೂರನೆ ಪಟ್ಟಿಯಲ್ಲಿ ನನಗೇ ಟಿಕೆಟ್ ನೀಡಬೇಕು. ಒಂದು ವೇಳೆ ಹರತಾಳು ಹಾಲಪ್ಪ ಅವರೇ ಸ್ಪರ್ಧಿಸುವುದಾದರೆ ಅವರಿಗೆ ನನ್ನ ಬೆಂಬಲ ಇರುವುದಿಲ್ಲ ಎಂದು ಸ್ಪಷ್ಟಪಡಿಸಿದರು. ನನ್ನ ಬೆಂಬಲಿಗರು, ಹಿತೈಷಿಗಳೊಂದಿಗೆ ಚರ್ಚಿಸಿ ಮುಂದಿನ ನಡೆ ನಿರ್ಧರಿಸುತ್ತೇನೆ ಎಂದು ಬೇಳೂರು ಗೋಪಾಲಕೃಷ್ಣ ತಿಳಿಸಿದರು.

Facebook Comments

Sri Raghav

Admin