ಸಿಲಿಂಡರ್ ಸ್ಫೋಟಗೊಂಡು ಮಹಿಳೆ ಸಾವು

ಈ ಸುದ್ದಿಯನ್ನು ಶೇರ್ ಮಾಡಿ

cylinder

ಶಿವಮೊಗ್ಗ, ಏ.17-ಸಿಲಿಂಡರ್ ಸ್ಫೋಟಗೊಂಡು ಮಹಿಳೆಯೊಬ್ಬರು ಸಾವನ್ನಪ್ಪಿ ಮೂವರು ಗಾಯಗೊಂಡಿರುವ ಘಟನೆ ನ್ಯೂಟೌನ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಭದ್ರಾವತಿಯ ಕೂಲಿ ಬ್ಲಾಕ್‍ನಲ್ಲಿ ಶೆಡ್‍ವೊಂದರಲ್ಲಿ ಸಿಲಿಂಡರ್ ಸ್ಫೋಟಗೊಂಡು ಮಹಿಳೆಯೊಬ್ಬರು ಸಾವನ್ನಪ್ಪಿ ಮೂವರು ಗಂಭೀರ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಸುದ್ದಿ ತಿಳಿದು ಸ್ಥಳಕ್ಕೆ ಭೇಟಿ ನೀಡಿದ ಪೊಲೀಸರು ಪರಿಶೀಲನೆ ನಡೆಸಿದ್ದಾರೆ. ನ್ಯೂ ಟೌನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Facebook Comments

Sri Raghav

Admin