ಅಪಘಾತದ ನೆಪದಲ್ಲಿ ಅನಂತಕುಮಾರ್ ಹೆಗಡೆ ಕೊಲೆಗೆ ಯತ್ನ : ತನಿಖೆಗೆ ಶೋಭಾ ಒತ್ತಾಯ

ಈ ಸುದ್ದಿಯನ್ನು ಶೇರ್ ಮಾಡಿ

shobhakarandlaje
ಬೆಂಗಳೂರು,ಏ.18- ಅಪಘಾತದ ನೆಪದಲ್ಲಿ ಕೇಂದ್ರ ಸಚಿವ ಅನಂತಕುಮಾರ್ ಹೆಗಡೆ ಅವರ ಕೊಲೆಯತ್ನ ನಡೆದಿದ್ದು , ಇದರ ಸಮಗ್ರ ತನಿಖೆಯಾಗಬೇಕೆಂದು ಸಂಸದೆ ಶೋಭಾ ಕರಂದ್ಲಾಜೆ ಒತ್ತಾಯಿಸಿದರು. ಬಸವ ಪ್ರತಿಮೆಗೆ ಮಾಲಾರ್ಪಣೆ ಮಾಡಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅನಂತಕುಮಾರ್ ಹೆಗಡೆ ಪ್ರಯಾಣಿಸುತ್ತಿದ್ದ ವೇಳೆ ಅವರ ಬೆಂಗಾವಲು ವಾಹನಕ್ಕೆ ಡಿಕ್ಕಿ ಹೊಡೆಯಲಾಗಿದೆ. ಇದರ ಅರ್ಥ ಏನು ಎಂದು ಪ್ರಶ್ನಿಸಿದರು.

ಅನಂತಕುಮಾರ್ ಹೆಗಡೆ ಅವರ ಮೇಲೆ ಹಲ್ಲೆ ಮಾಡಿ ಕೊಲೆಗೆ ಯತ್ನಿಸಲಾಗಿದೆ. ಇದರ ತನಿಖೆ ಮಾಡಿ ಆರೋಪಿಗಳನ್ನು ಬಂಧಿಸಬೇಕು ಮತ್ತು ಕೇಂದ್ರ ಸಚಿವರಿಗೆ ಸೂಕ್ತ ರಕ್ಷಣೆ ನೀಡಬೇಕೆಂದು ಒತ್ತಾಯಿಸಿದರು.  ಯಶವಂತಪುರ ವಿಧಾನಸಭಾ ಕ್ಷೇತ್ರದಲ್ಲಿ ಸ್ಪರ್ಧಿಸಲು ನಾನು ಟಿಕೆಟ್ ಕೇಳಿಲ್ಲ. ನನಗೆ ಇನ್ನು ಸಂಸದರ ಅವಧಿ ಬಾಕಿ ಇದೆ. ವಿಧಾನಸಭಾ ಚುನಾವಣೆಗೆ ಸ್ಪರ್ಧಿಸಲು ಟಿಕೆಟ್ ನೀಡುವಂತೆ ಅರ್ಜಿ ಸಲ್ಲಿಸಿಲ್ಲ ಎಂದು ಸ್ಪಷ್ಟಪಡಿಸಿದರು.

Facebook Comments

Sri Raghav

Admin