ಎಸ್‍ಬಿಐ ಎಟಿಎಂಗಳಲ್ಲಿ ಹಣದ ಲಭ್ಯತೆ ಉತ್ತಮ

ಈ ಸುದ್ದಿಯನ್ನು ಶೇರ್ ಮಾಡಿ

rbi-sbi

ನವದೆಹಲಿ,ಏ.18-ತನ್ನ ಎಟಿಎಂಗಳಲ್ಲಿ ಹಣದ ಲಭ್ಯತೆ ಉತ್ತಮವಾಗಿದೆ ಎಂದು ಸ್ಟೇಟ್ ಬ್ಯಾಂಕ್ ಆಫ್ ಇಂಡಿಯ ತಿಳಿಸಿದೆ. ಕಳೆದ ಕೆಲವು ದಿನಗಳಿಂದ ದೇಶಾದ್ಯಂತ ಹಲವು ನಗರಗಳಲ್ಲಿ ಪಂಜಾಬ್ ನ್ಯಾಷನಲ್ ಬ್ಯಾಂಕ್,ಕೆನರಾ ಬ್ಯಾಂಕ್,ಆಕ್ಸಿಸ್ ಬ್ಯಾಂಕ್ ಸೇರಿದಂತೆ ಹಲವು ಬ್ಯಾಂಕ್‍ಗಳಲ್ಲಿನ ಎಟಿಎಂಗಳಲ್ಲಿ ಹಣ ಸಿಗುತ್ತಿಲ್ಲ ಎಂದು ಗ್ರಾಹಕರು ದೂರುತ್ತಿದ್ದಾರೆ.

ಈ ಹಿನ್ನೆಲೆಯಲ್ಲಿ ರಿಸರ್ವ್ ಬ್ಯಾಂಕ ಆಫ್ ಇಂಡಿಯ, ಯಾವುದೇ ಬ್ಯಾಂಕುಗಳ ಎಟಿಎಂಗಳಲ್ಲಿ ಹಣದ ಕೊರತೆಯಾಗದಂತೆ ನೋಡಿಕೊಳ್ಳಲಾಗುವುದು ಎಂದು ಭರವಸೆ ನೀಡಿದೆ. ಚುನಾವಣಾ ಹೊಸ್ತಿಲಲ್ಲಿರುವ ಕರ್ನಾಟಕ ಸೇರಿದಂತೆ ಉತ್ತರ ಪ್ರದೇಶ,ಮಧ್ಯ ಪ್ರದೇಶ,ಮತ್ತಿತರ ರಾಜ್ಯಗಳಲ್ಲಿನ ಎಟಿಎಂಗಳು ಹಣವಿಲ್ಲದೆ ಬಂದ್ ಆಗಿವೆ ಹಣಕ್ಕೆ ಬೇಡಿಕೆ ಹೆಚ್ಚಾಗಿದೆ. ಹಾಗಾಗಿ ಎಸ್‍ಬಿಐ ಈಸಂಬಂಧ ಸ್ಪಷ್ಟನೆ ನೀಡಿದೆ. ಕಳೆದ 24 ಗಂಟೆಗಳಲ್ಲಿ ಎಸ್‍ಬಿಐನ ಎಟಿಎಂಗಳಲ್ಲಿ ಹಣದ ಲಭ್ಯತೆ ಉತ್ತಮವಾಗಿದೆ. ಕೆಲವೇ ದಿನಗಳಲ್ಲಿ ಇಲ್ಲ ಸರಿ ಹೋಗಲಿದೆ ಎಂದು ಎಸ್‍ಬಿಐ ಮುಖ್ಯ ಆಪರೇಟಿಂಗ್ ಆಫೀಸರ್ ನೀರಜ್ ವ್ಯಾಸ್ ಸ್ಪಷ್ಟಪಡಿಸಿದ್ದಾರೆ.

Facebook Comments

Sri Raghav

Admin