ಕನ್ನಡದಲ್ಲಿ ಬಸವ ಜಯಂತಿ ಶುಭಾಶಯ ಕೋರಿದ ಮೋದಿ

ಈ ಸುದ್ದಿಯನ್ನು ಶೇರ್ ಮಾಡಿ

Modi--1
ನವದೆಹಲಿ. ಏ.18 : ವಿಶ್ವಗುರು ಬಸವೇಶ್ವರ ಜಯಂತಿ ಹಿನ್ನೆಲೆ ಪ್ರಧಾನಿ ನರೇಂದ್ರ ಮೋದಿ ಅವರು ಟ್ವೀಟ್ ಮಾಡುವ ಮೂಲಕ ಶುಭಾಶಯಗಳನ್ನು ಕೋರಿದ್ದಾರೆ. ವಿಶೇಷ ಅಂದರೆ ಮೋದಿ ಅವರು ಕನ್ನಡದಲ್ಲಿ ಟ್ವೀಟ್ ಮಾಡಿದ್ದಾರೆ. ಭಗವಾನ್ ಬಸವೇಶ್ವರರಿಗೆ ಅವರ ಜಯಂತಿಯಂದು ನಾನು ತಲೆ ಬಾಗುತ್ತೇನೆ. ನಮ್ಮ ಇತಿಹಾಸ ಮತ್ತು ಸಂಸ್ಕೃತಿಯಲ್ಲಿ ಅವರು ಕೇಂದ್ರಸ್ಥಾನ ಅಲಂಕರಿಸುತ್ತಾರೆ. ಸಾಮಾಜಿಕ ಸೌಹಾರ್ದತೆ, ಸಹೋದರತ್ವ, ಏಕತೆ ಮತ್ತು ಸಹಾನುಭೂತಿಗೆ ಅವರು ನೀಡಿದ ಪ್ರಾಮುಖ್ಯತೆ, ನಮಗೆ ಸದಾ ಪ್ರೇರಣೆ. ಜಗದ್ಗುರು ಬಸವೇಶ್ವರರು ನಮ್ಮ ಸಮಾಜವನ್ನು ಒಂದುಗೂಡಿಸಿದರು ಮತ್ತು ಜ್ಞಾನದ ಪ್ರಾಮುಖ್ಯತೆಗೆ ಮಹತ್ವ ನೀಡಿದರು ಎಂದು ಟ್ವೀಟ್ ಮಾಡಿದ್ದಾರೆ.

Facebook Comments

Sri Raghav

Admin