ನಟ ಶಶಿಕುಮಾರ್ ಜೆಡಿಎಸ್ ಸೇರ್ಪಡೆ

ಈ ಸುದ್ದಿಯನ್ನು ಶೇರ್ ಮಾಡಿ

NaShahsikumar--01

ಬೆಂಗಳೂರು,ಏ.19- ಮಾಜಿ ಸಂಸದ ಹಾಗೂ ಚಲನಚಿತ್ರ ನಟ ಶಶಿಕುಮಾರ್ ಅವರು ಜೆಡಿಎಸ್ ಸೇರ್ಪಡೆಯಾದರು. ಇಂದು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರ ಸಮ್ಮುಖದಲ್ಲಿ ಶಶಿಕುಮಾರ್ ಜೆಡಿಎಸ್ ಸೇರಿದರು. ಪದ್ಮನಾಭನಗರದ ದೇವೇಗೌಡರ ನಿವಾಸದಲ್ಲಿ ಕಾಂಗ್ರೆಸ್ ಪಕ್ಷ ತೊರೆದು ಜೆಡಿಎಸ್ ಸೇರಿದ ಶಶಿಕುಮಾರ್ ಅವರ ಪ್ರಸಕ್ತ ವಿಧಾನಸಭೆ ಚುನಾವಣೆಯಲ್ಲಿ ಹೊಸದುರ್ಗ ಕ್ಷೇತ್ರದಿಂದ ಸ್ಪರ್ಧಿಸುವ ಸಾಧ್ಯತೆಗಳಿವೆ. ಜೆಡಿಎಸ್ ಪಕ್ಷದಿಂದ ಅಭ್ಯರ್ಥಿಯಾಗಿ ಕಣಕ್ಕಿಳಿಸುವ ಸಾಧ್ಯತೆಗಳಿವೆ ಎಂದು ಪಕ್ಷದ ಮೂಲಗಳು ತಿಳಿಸಿವೆ.

Facebook Comments

Sri Raghav

Admin