ಚಾಮುಂಡೇಶ್ವರಿಯಲ್ಲಿ ನಾಮಪತ್ರ ಸಲ್ಲಿಕೆ ವೇಳೆ ಸಿಎಂ-ಜಿಟಿಡಿ ಕಾರ್ಯಕರ್ತರ ನಡುವೆ ಜಟಾಪಟಿ

ಈ ಸುದ್ದಿಯನ್ನು ಶೇರ್ ಮಾಡಿ

Siddaramaiah--01-Nomination

ಮೈಸೂರು, ಏ.20-ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಜೆಡಿಎಸ್‍ನ ಅಭ್ಯರ್ಥಿ ಜಿ.ಟಿ.ದೇವೇಗೌಡ ನಾಮಪತ್ರ ಸಲ್ಲಿಸುವ ಸಂದರ್ಭದಲ್ಲಿ ಕಾರ್ಯಕರ್ತರ ನಡುವೆ ಜಟಾಪಟಿ ನಡೆದಿದೆ. ಕಾಂಗ್ರೆಸ್-ಬಿಜೆಪಿ ಎರಡೂ ಪಕ್ಷದ ಕಾರ್ಯಕರ್ತರು ಭಾರೀ ಸಂಖ್ಯೆಯಲ್ಲಿ ಅರಮನೆ ಮುಂಭಾಗ ಏಕಕಾಲದಲ್ಲಿ ಮೆರವಣಿಗೆಯಲ್ಲಿ ಆಗಮಿಸಿದ ಸಂದರ್ಭದಲ್ಲಿ ಪರಸ್ಪರ ವಿರುದ್ಧದ ಘೋಷಣೆಗಳು ಮೊಳಗಿವೆ. ಈ ಸಂದರ್ಭದಲ್ಲಿ ಬಿಗುವಿನ ವಾತಾವರಣ ಉಂಟಾಗಿದೆ. ಪರಿಸ್ಥಿತಿ ನಿಭಾಯಿಸಲು ಪೊಲೀಸರು ಲಘು ಲಾಠಿ ಪ್ರಹಾರ ಮಾಡಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ. ಮುಂಡೇಶ್ವರಿಕ್ಷೇತ್ರದ ಕಾಂಗ್ರೆಸ್ ಹುರಿಯಾಳಾಗಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಸಾಂಸ್ಕøತಿಕ ನಗರಿ ಮೈಸೂರಿನ ಕೋಟೆ ಆಂಜನೇಯ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿ ನಂತರ ನಾಮಪತ್ರ ಸಲ್ಲಿಸಲು ತೆರಳಿದರು.

ಈ ಸಂದರ್ಭದಲ್ಲಿ ಭಾರೀ ಸಂಖ್ಯೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತರು ನೆರೆದಿದ್ದರು. ಇದೇ ವೇಳೆ ಜೆಡಿಎಸ್ ಕಾರ್ಯಕರ್ತರೂ ಮೆರವಣಿಗೆಯಲ್ಲಿ ಸಾಗಿ ಬಂದರು. ಎರಡೂ ಪಕ್ಷಗಳ ಕಾರ್ಯಕರ್ತರು ಮುಖಾಮುಖಿಯಾದರು. ಬಾವುಟಗಳನ್ನು ಹಿಡಿದು ಪರಸ್ಪರ ಘೋಷಣೆಗಳನ್ನು ಕೂಗಲು ಶುರುಮಾಡಿದರು. ಮೈಸೂರು ಅರಮನೆ ಮುಂದೆ ಜನಸಾಗರ ಸೇರಿತ್ತು. ಈ ಸಂದರ್ಭದಲ್ಲಿ ಮಧ್ಯಪ್ರವೇಶಿಸಿದ ಪೊಲೀಸರು ಪರಿಸ್ಥಿತಿ ನಿಭಾಯಿಸಲು ಲಘು ಲಾಠಿ ಪ್ರಹಾರ ಮಾಡಲಾಯಿತು.

Facebook Comments

Sri Raghav

Admin