ಬಾದಾಮಿಯಲ್ಲಿ ಜೆಡಿಎಸ್ ಅಭ್ಯರ್ಥಿಯಾಗಿ ಹನುಮಂತಪ್ಪ ಮಾವಿನ ಮರದ್ ಕಣಕ್ಕೆ

ಈ ಸುದ್ದಿಯನ್ನು ಶೇರ್ ಮಾಡಿ

Anumantappa-Mavinamarad
ಬೆಂಗಳೂರು, ಏ.20-ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪರ್ಧಿಸುವ ಸಾಧ್ಯತೆ ಇರುವುದರಿಂದ ಭಾರೀ ಕುತೂಹಲ ಕೆರಳಿಸಿರುವ ಬಾದಾಮಿ ವಿಧಾನಸಭಾ ಕ್ಷೇತ್ರದಿಂದ ಜೆಡಿಎಸ್ ಅಭ್ಯರ್ಥಿಯಾಗಿ ಹನುಮಂತಪ್ಪ ಮಾವಿನಮರದ್ ಕಣಕ್ಕಿಳಿಯಲಿದ್ದಾರೆ. ಚುನಾವಣೆಯನ್ನು ಪ್ರತಿಷ್ಠೆಯಾಗಿ ಸ್ವೀಕರಿಸಿರುವ ಮಾಜಿ ಮುಖ್ಯಮಂತ್ರಿ ಹಾಗೂ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಅವರು ಸ್ಥಳೀಯ ಪ್ರಭಾವಿ ಮುಖಂಡ ಹನುಮಂತಪ್ಪ ಮಾವಿನಮರದ್ ಅವರನ್ನು ಕಣಕ್ಕಿಳಿಸಲು ನಿರ್ಧರಿಸಿದ್ದಾರೆ ಎಂದು ಪಕ್ಷದ ಮೂಲಗಳು ತಿಳಿಸಿವೆ.

ನಾಳೆ ಬೆಳಿಗ್ಗೆ ಹನುಮಂತಪ್ಪ ಅವರು ನಾಮಪತ್ರ ಸಲ್ಲಿಸಲಿದ್ದು, ಕುಮಾರಸ್ವಾಮಿ ಅವರೂ ಕೂಡ ಅವರ ಜೊತೆ ಇರುತ್ತಾರೆ ಮತ್ತು ಪಕ್ಷದ ಕಾರ್ಯಕರ್ತರು, ಮುಖಂಡರ ಸಭೆಯನ್ನು ಕೂಡ ನಡೆಸಲಿದ್ದಾರೆ.  ಇದೇ ವೇಳೆ ಈ ಭಾಗದ ಹಲವು ಮುಖಂಡರು ಜೆಡಿಎಸ್‍ಗೆ ಸೇರ್ಪಡೆಯಾಗಲಿದ್ದಾರೆ ಎಂದು ಹೇಳಲಾಗುತ್ತಿದೆ. ಒಟ್ಟಾರೆ ಬಾದಾಮಿ ಕ್ಷೇತ್ರ ರಾಜ್ಯದ ಕೇಂದ್ರಬಿಂದುವಾಗಿ ಮಾರ್ಪಟ್ಟಿದೆ.

Facebook Comments

Sri Raghav

Admin