136 ಸ್ಥಾನಗಳಲ್ಲಿ ಗೆದ್ದು ಬಹುಮತದೊಂದಿಗೆ ಕಾಂಗ್ರೆಸ್‍ ಅಧಿಕಾರಕ್ಕೆ ಬರುತ್ತೆ : ವೇಣುಗೋಪಾಲ್

ಈ ಸುದ್ದಿಯನ್ನು ಶೇರ್ ಮಾಡಿ

Venugopal--01
ಬೆಂಗಳೂರು, ಏ.21-ರಾಜ್ಯದಲ್ಲಿ ಕಾಂಗ್ರೆಸ್ 136 ಸ್ಥಾನಗಳಲ್ಲಿ ಗೆದ್ದು ಸ್ಪಷ್ಟ ಬಹುಮತದೊಂದಿಗೆ ಅಧಿಕಾರಕ್ಕೆ ಬರಲಿದೆ ಯಾವುದೇ ಕಾರಣಕ್ಕೂ ಇಲ್ಲಿ ಅತಂತ್ರ ವಿಧಾನಸಭೆ ನಿರ್ಮಾಣವಾಗುವುದಿಲ್ಲ ಎಂದು ಎಐಸಿಸಿ ಪ್ರಧಾನಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ ಹೇಳಿದರು. ನಗರದ ಖಾಸಗಿ ಹೊಟೇಲ್‍ನಲ್ಲಿ ಮುಖ್ಯಮಂತ್ರಿ ಮಾತು ಎಂಬ ಮೊಬೈಲ್ ಅಪ್ಲಿಕೇಷನ್ ಬಿಡುಗಡೆ ಮಾಡಿ, ಮಾತನಾಡಿದ ಅವರು, ರಾಜ್ಯದಲ್ಲಿ ಅತಂತ್ರ ವಿಧಾನಸಭೆ ನಿರ್ಮಾಣವಾಗುತ್ತದೆ ಎಂದು ಕೆಲವು ಸಮೀಕ್ಷೆಗಳು ಹೇಳಿವೆ. ನಮಗೆ ಸಮೀಕ್ಷೆಗಳ ಮೇಲೆ ನಂಬಿಕೆ ಇಲ್ಲ. ಜನರ ವಿಶ್ವಾಸದ ಮೇಲೆ ನಂಬಿಕೆ ಇದೆ. ಹಾಗಾಗಿ ಮುಂದಿನ ಚುನಾವಣೆಯಲ್ಲಿ ಸ್ಪಷ್ಟ ಬಹುಮತದೊಂದಿಗೆ ನಾವು ಅಧಿಕಾರಕ್ಕೆ ಬರುವುದು ಖಚಿತ ಎಂದರು.

ಬಿಜೆಪಿ ನಾಯಕರು ಭ್ರಷ್ಟಾಚಾರದ ಬಗ್ಗೆ ಮಾತನಾಡುತ್ತಾರೆ. ಆದರೆ ಅವರು ಪ್ರಕಟಿಸಿರುವ ಅಭ್ಯರ್ಥಿಗಳ ಬಗ್ಗೆ ನೋಡಿದರೆ ಭ್ರಷ್ಟಾಚಾರದ ಬಗ್ಗೆ ಮಾತನಾಡುವ ನೈತಿಕತೆಯೇ ಅವರಿಗಿಲ್ಲ. ಅಭಿವೃದ್ಧಿ ಬಗ್ಗೆ ಮಾತನಾಡದೆ ಬಿಜೆಪಿಯವರು ಭಾವನಾತ್ಮಕ ವಿಷಯಗಳನ್ನು ಮುಂದಿಟ್ಟುಕೊಂಡು ಚುನಾವಣೆಯನ್ನು ಎದುರಿಸುವ ಪ್ರಯತ್ನ ಮಾಡುತ್ತಿದ್ದಾರೆ ಎಂದು ಹೇಳಿದರು.

ಈ ಚುನಾವಣೆ ದೇಶಕ್ಕೆ ಮತ್ತು ಕಾಂಗ್ರೆಸ್‍ಗೆ ಅತ್ಯಂತ ಮಹತ್ವದ್ದಾಗಿದೆ. ಹೀಗಾಗಿ ನಾವು ಗೆದ್ದೇ ಗೆಲ್ಲುತ್ತೇವೆ ಎಂದು ವಿಶ್ವಾಸ ವ್ಯಕ್ತಪಡಿಸಿದರು. ಕರ್ನಾಟಕ ಅಭಿವೃದ್ಧಿ ವಿಷಯದಲ್ಲಿ ಸದಾ ಕಾಲ ಮುಂದಿದೆ. ಸಿದ್ದರಾಮಯ್ಯ ದೇಶದ ಜನರು ಬಯಸಿದ ಮುಖ್ಯಮಂತ್ರಿ ಎಂದು ಹೇಳಿದರು.

Facebook Comments

Sri Raghav

Admin