BREAKING : 11 ಕ್ಷೇತ್ರಗಳ ಕಾಂಗ್ರೆಸ್ 2ನೇ ಪಟ್ಟಿ ಬಿಡುಗಡೆ

ಈ ಸುದ್ದಿಯನ್ನು ಶೇರ್ ಮಾಡಿ

Congresss--222
ಬೆಂಗಳೂರು, ಏ.22-ಕಾಂಗ್ರೆಸ್ 2ನೇ ಹಂತದ ಪಟ್ಟಿಯಲ್ಲಿ 11 ಮಂದಿಗೆ ಟಿಕೆಟ್ ನೀಡುವ ಮೂಲಕ 224 ಕ್ಷೇತ್ರಗಳ ಅಭ್ಯರ್ಥಿಗಳನ್ನು ಅಖೈರುಗೊಳಿಸಿದೆ.
ಈಗಾಗಲೇ ಚಾಮುಂಡೇಶ್ವರಿ ಕ್ಷೇತ್ರದಿಂದ ಟಿಕೆಟ್ ಪಡೆದು ನಾಮಪತ್ರ ಸಲ್ಲಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಬಾದಾಮಿ ಕ್ಷೇತ್ರದಿಂದಲೂ ಸ್ಪರ್ಧಿಸಲು ಅವಕಾಶ ಗಿಟ್ಟಿಸಿದ್ದಾರೆ.  ಎರಡನೇ ಪಟ್ಟಿಯಲ್ಲಿ ಕಾಂಗ್ರೆಸ್ ಹೈಕಮಾಂಡ್ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಬಾದಾಮಿಯಿಂದ ಟಿಕೆಟ್ ನೀಡಿದ್ದು, ಈ ಮೊದಲು ಘೋಷಿಸಲಾಗಿದ್ದ ಡಾ.ದೇವರಾಜ ಪಾಟೀಲ್ ಅವರ ಹೆಸರನ್ನು ಹಿಂಪಡೆದಿದೆ. ಆ ಕ್ಷೇತ್ರದಲ್ಲಿ ಮಾಜಿ ಸಚಿವ ಹಾಗೂ ಹಾಲಿ ಶಾಸಕ ಬಿ.ಬಿ.ಚಿಮ್ಮನಕಟ್ಟಿ ಪ್ರಬಲ ಆಕಾಂಕ್ಷಿಯಾಗಿದ್ದು, ತಮಗೇ ಟಿಕೆಟ್ ನೀಡುವಂತೆ ಪಟ್ಟು ಹಿಡಿದಿದ್ದರು. ಈಗ ಸಿದ್ದರಾಮಯ್ಯ ಅವರು ಕಣಕ್ಕಿಳಿಯುವ ಮೂಲಕ ರಾಜಕೀಯ ರಂಗೇರಿದೆ.
ಬಾದಾಮಿ ಸೇರಿದಂತೆ ಜಗಳೂರು, ಮಡಿಕೇರಿ, ತಿಪಟೂರು, ಮಲ್ಲೇಶ್ವರಂ, ಪದ್ಮನಾಭನಗರ ಕ್ಷೇತ್ರಗಳಿಗೆ ಈ ಮೊದಲು ನೀಡಿದ್ದ ಟಿಕೆಟ್‍ನ್ನು ಹಿಂಪಡೆಯಲಾಗಿದ್ದು, ಹೊಸಬರಿಗೆ ಅವಕಾಶ ಕಲ್ಪಿಸಲಾಗಿದೆ.

ಪುತ್ರನ ಗಲಾಟೆಯಿಂದಾಗಿ ತೊಂದರೆಗೆ ಸಿಲುಕಿದ್ದ ಹಾಲಿ ಶಾಸಕ ಎನ್.ಎ.ಹ್ಯಾರೀಸ್ ಅವರಿಗೆ ಮೊದಲ ಪಟ್ಟಿಯಲ್ಲಿ ಟಿಕೆಟ್ ಘೋಷಿಸದೆ ತಡೆಹಿಡಿಯಲಾಗಿತ್ತು. ಒಂದು ಹಂತದಲ್ಲಿ ಸಿದ್ದರಾಮಯ್ಯ ಅವರೇ ಶಾಂತಿನಗರದಲ್ಲಿ ಸ್ಪರ್ಧಿಸುತ್ತಾರೆ ಎಂಬ ವದಂತಿಗಳು ಹರಡಿದ್ದವು. ಈ ಎಲ್ಲಾ ಗೊಂದಲಗಳಿಗೆ ತೆರೆ ಎಳೆದಿರುವ ಹೈಕಮಾಂಡ್ ಅಂತಿಮವಾಗಿ ಎನ್.ಎ.ಹ್ಯಾರೀಸ್ ಅವರಿಗೆ ಶಾಂತಿನಗರದಿಂದ ಸ್ಪರ್ಧಿಸಲು ಅವಕಾಶ ಮಾಡಿಕೊಟ್ಟಿದೆ.

ಮೊದಲ ಪಟ್ಟಿಯಲ್ಲಿ ಪ್ರಕಟಗೊಳ್ಳದೆ ಇದ್ದ ಕಿತ್ತೂರು, ನಾಗಠಾಣ, ರಾಯಚೂರು, ಸಿಂಧಗಿ, ಶಾಂತಿನಗರ ಕ್ಷೇತ್ರಗಳಿಗೆ ಟಿಕೆಟ್ ಘೋಷಿಸಲಾಗಿದೆ. ಮೇಲುಕೋಟೆ ಕ್ಷೇತ್ರದಿಂದ ಅಭ್ಯರ್ಥಿಗಳನ್ನು ಕಣಕ್ಕಿಳಿಸಿದರೆ ಶಾಸಕರಾಗಿದ್ದ ರೈತ ನಾಯಕ ಕೆ.ಎಸ್.ಪುಟ್ಟಣ್ಣಯ್ಯ ಪುತ್ರ ದರ್ಶನ್‍ಗೆ ಕಾಂಗ್ರೆಸ್ ಬೆಂಬಲ ವ್ಯಕ್ತಪಡಿಸಿದೆ.
ಈ ಮೂಲಕ 223 ಕ್ಷೇತ್ರಗಳಿಗೆ ಕಾಂಗ್ರೆಸ್ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ.

Congress--0-List

Facebook Comments

Sri Raghav

Admin