ಬಾದಾಮಿ ಬಿಗ್ ಫೈಟ್ ಗೆ ಅಖಾಡ ಸಜ್ಜು, ರಾಮುಲು-ಸಿದ್ದರಾಮಯ್ಯ ನಾಮಪತ್ರ ಸಲ್ಲಿಕೆ

ಈ ಸುದ್ದಿಯನ್ನು ಶೇರ್ ಮಾಡಿ

Badami-Fight--01

ಬೆಂಗಳೂರು, ಏ.24- ಬಾದಾಮಿಯಲ್ಲಿಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಬಿ. ಶ್ರೀರಾಮುಲು ನಾಮಪತ್ರ ಸಲ್ಲಿಸುವ ಮೂಲಕ ಮತ್ತೊಂದು ಹೈವೋಲ್ಟೇಜ್ ಫೈಟ್ ಗೆ ರಣಕನ ರೆಡಿಯಾಗಿದೆ . ಹಲವು ಗೊಂದಲಗಳು, ರಾಜಕೀಯ ಪಕ್ಷಗಳ ಚದುರಂಗದಾಟದ ನಡುವೆ ಚಾಮುಂಡೇಶ್ವರಿ ಕ್ಷೇತ್ರ ಸೇರಿದಂತೆ ಎರಡು ಕಡೆ ಸಿಎಂ ಸಿದ್ದರಾಮಯ್ಯ ನಾಮಪತ್ರ ಸಲ್ಲಿಸಿ ಅಖಾಡಕ್ಕಿಳಿದರು. ಬಾದಾಮಿಯಲ್ಲಿಂದು ಭಾರೀ ಮೆರವಣಿಗೆಯಲ್ಲಿ ಸಿದ್ದರಾಮಯ್ಯ ಅವರನ್ನು ಕರೆದೊಯ್ದ ಅವರ ಅಪಾರ ಅಭಿಮಾನಿಗಳು, ಪಕ್ಷದ ಕಾರ್ಯಕರ್ತರು ನಾಮಪತ್ರ ಸಲ್ಲಿಕೆಗೆ ಸಾಥ್ ನೀಡಿದರು.

ಬಾಗಲಕೋಟೆ ಉಸ್ತುವಾರಿ ಸಚಿವ ಆರ್.ಬಿ.ತಿಮ್ಮಾಪುರ್, ಟಿಕೆಟ್ ಆಕಾಂಕ್ಷಿಯಾಗಿದ್ದ ಬಿ.ಬಿ.ಚಿಮ್ಮನಕಟ್ಟಿ, ಬಿ ಫಾರಂ ಪಡೆದಿದ್ದ ದೇವರಾಜ್ ಪಾಟೀಲ್ ಅವರೇ ಮುಂದೆ ನಿಂತು ಸಿಎಂ ಸಿದ್ದರಾಮಯ್ಯ ಅವರ ನಾಮಪತ್ರ ಸಲ್ಲಿಸಲು ಸಹಕರಿಸಿದರು. ಮೊದಮೊದಲು ಸಿದ್ದರಾಮಯ್ಯನವರು ಎರಡೂ ಕಡೆ ಸ್ಪರ್ಧಿಸಲು ಹೈಕಮಾಂಡ್ ಒಲವು ವ್ಯಕ್ತಪಡಿಸಿರಲಿಲ್ಲ. ಆದರೆ, ನಂತರದ ದಿನಗಳಲ್ಲಿ ಬಾದಾಮಿಯಲ್ಲಿ ಸ್ಪರ್ಧಿಸಲು ಹಸಿರು ನಿಶಾನೆ ತೋರಿತ್ತು. ಉತ್ತರ ಕರ್ನಾಟಕ ಭಾಗದ ಶಾಸಕರುಗಳು, ಆ ಭಾಗದ ಜನರೇ ಇಲ್ಲಿ ಸ್ಪರ್ಧಿಸುವಂತೆ ಒತ್ತಡ ತಂದಿದ್ದರು. ಈ ಹಿನ್ನೆಲೆಯಲ್ಲಿ ನಾಮಪತ್ರ ಸಲ್ಲಿಸಲು ಕೊನೆಯ ದಿನವಾದ ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನಾಮಪತ್ರ ಸಲ್ಲಿಕೆಗೆ ಬಾದಾಮಿಗೆ ಆಗಮಿಸಿದಾಗ ಭಾರೀ ಜನಸ್ತೋಮ ನೆರೆದಿತ್ತು. ಘೋಷಣೆಗಳು ಮುಗಿಲು ಮುಟ್ಟಿದವು. ಭಾರೀ ಮೆರವಣಿಗೆಯಲ್ಲಿ ಸಾಗಿ ಶಕ್ತಿ ಪ್ರದರ್ಶನ ಮಾಡಿದರು.

ಇದಕ್ಕೂ ಮುನ್ನ ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ಬಾದಾಮಿಯಲ್ಲಿ ನಾನು ಒಂದು ದಿನ ಮಾತ್ರ ಪ್ರಚಾರ ಮಾಡುತ್ತೇನೆ. ಉಳಿದಂತೆ ನಮ್ಮ ಕಾರ್ಯಕರ್ತರು, ಮುಖಂಡರು ಪ್ರಚಾರ ಮಾಡುತ್ತಾರೆ. ಬಾದಾಮಿ, ಚಾಮುಂಡೇಶ್ವರಿ ಎರಡೂ ಕ್ಷೇತ್ರಗಳಲ್ಲಿ ಗೆಲುವು ಸಾಧಿಸುತ್ತೇನೆ. ನಾನು ಯಾವ ಸರ್ವೆಯನ್ನೂ ನಂಬುವುದಿಲ್ಲ. ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದೇ ಬರುತ್ತದೆ ಎಂದು ಹೇಳಿದರು.

Facebook Comments

Sri Raghav

Admin