ಕಾಂಗ್ರೆಸ್ ಮುಕ್ತ ಕರ್ನಾಟಕ : ಜಾವ್ಡೇಕರ್ ಭವಿಷ್ಯ

ಈ ಸುದ್ದಿಯನ್ನು ಶೇರ್ ಮಾಡಿ

Prakash-Javdekar--01
ಹಾವೇರಿ, ಮೇ 1- ಲೋಕಸಭೆ ಚುನಾವಣೆ ನಂತರ ಸೋತು ಮೂಲೆ ಗುಂಪಾಗಿರುವ ಕಾಂಗ್ರೆಸ್ ಪಕ್ಷ ಈ ಬಾರಿಯ ವಿಧಾನಸಭೆ ಚುನಾವಣೆಯಲ್ಲಿ ಕರ್ನಾಟಕದಿಂದ ಮುಕ್ತವಾಗಲಿದೆ ಎಂದು ರಾಜ್ಯ ಬಿಜೆಪಿ ಚುನಾವಣಾ ಉಸ್ತುವಾರಿ ಹಾಗೂ ಕೇಂದ್ರ ಸಚಿವ ಪ್ರಕಾಶ್ ಜಾವ್ಡೇಕರ್ ಭವಿಷ್ಯ ನುಡಿದಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, 2014ರ ಲೋಕಸಭೆ ಚುನಾವಣೆ ಬಳಿಕ ಹಲವಾರು ರಾಜ್ಯಗಳಲ್ಲಿ ನಡೆದ ವಿಧಾನಸಭೆ ಚುನಾವಣೆಗಳಲ್ಲಿ ಪಂಜಾಬ್ ಮತ್ತು ಪಾಂಡೇಚರಿ ಹೊರತುಪಡಿಸಿದರೆ ಕಾಂಗ್ರೆಸ್ ಎಲ್ಲಿಯೂ ಗೆದ್ದಿಲ್ಲ. ಇನ್ನು ಕರ್ನಾಟಕದಲ್ಲಿ ಗೆಲ್ಲುವುದು ಸಾಧ್ಯವೇ ಎಂದು ಪ್ರಶ್ನಿಸಿದರು.

ಯಾವುದೇ ಕಾರಣಕ್ಕೂ ಈ ಬಾರಿ ಚುನಾವಣೆಯಲ್ಲಿ ಕಾಂಗ್ರೆಸ್ ಗೆಲ್ಲುವುದಿಲ್ಲ. ರಾಜ್ಯದಲ್ಲಿ ಕಾಂಗ್ರೆಸ್ ಸಂಪೂರ್ಣವಾಗಿ ನೆಲಕಚ್ಚುವುದು ನೂರಕ್ಕೆ ನೂರರಷ್ಟು ಖಚಿತ. ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ರಾಜ್ಯಕ್ಕೆ ಭೇಟಿ ನೀಡಿದಾಗಲೇ ಇದು ಸಾಬೀತಾಗಿದೆ ಎಂದು ವ್ಯಂಗ್ಯವಾಡಿದರು.  ರಾಹುಲ್‍ಗಾಂಧಿ ಎಲ್ಲೆ ಹೋದರೂ ಕಾಂಗ್ರೆಸ್ ಗೆಲ್ಲುವುದಿಲ್ಲ. ಇದು ಗೊತ್ತಾಗಿಯೇ ಅವರು ಏನೋ ಹೇಳಲು ಹೋಗಿ ಮತ್ತೇನೋ ಹೇಳಿ ಎಡವಟ್ಟು ಮಾಡಿಕೊಳ್ಳುತ್ತಿದ್ದಾರೆ. ಕರ್ನಾಟಕದ ಜನತೆ ಸಿದ್ದರಾಮಯ್ಯನವರ ಆಡಳಿತದಿಂದ ಬೇಸತ್ತು ಬಿಜೆಪಿ ಪರ ಒಲವು ತೋರುತ್ತಿದ್ದಾರೆ.  ಐದು ವರ್ಷಗಳ ಕಾಲ ಯಡಿಯೂರಪ್ಪನವರೇ ರಾಜ್ಯದ ಮುಖ್ಯಮಂತ್ರಿಯಾಗಿ ಸುಭದ್ರ ಆಡಳಿತ ನೀಡುವರು. ಕರ್ನಾಟಕದ ಜನತೆ ಮತ್ತೊಮ್ಮೆ ಅವರನ್ನು ಕುರ್ಚಿ ಮೇಲೆ ಕೂರಿಸಲು ತುದಿಗಾಲಲ್ಲಿ ನಿಂತಿದ್ದಾರೆ ಎಂದು ಹೇಳಿದರು.

Facebook Comments

Sri Raghav

Admin