ಮಕ್ಕಳ ಅತ್ಯಾಚಾರ ಪ್ರಕರಣಗಳ ತ್ವರಿತ ವಿಚಾರಣೆ : ಹೈಕೋರ್ಟ್‍ಗಳಿಗೆ ಸುಪ್ರೀಂ ಆದೇಶ

ಈ ಸುದ್ದಿಯನ್ನು ಶೇರ್ ಮಾಡಿ

Supre-Court-Judgement
ನವದೆಹಲಿ, ಮೇ 1-ಮಕ್ಕಳ ಮೇಲಿನ ಅತ್ಯಾಚಾರ ಮತ್ತು ಲೈಂಗಿಕ ಹಲ್ಲೆ ಪ್ರಕರಣಗಳ ವಿಚಾರಣೆಯಲ್ಲಿ ತ್ವರಿತವಾಗಿ ನಡೆಸುವಂತೆ ದೇಶದ ಎಲ್ಲ ಹೈಕೋರ್ಟ್‍ಗಳಿಗೆ ಇಂದು ಕಟ್ಟುನಿಟ್ಟಿನ ಆದೇಶ ನೀಡಿರುವ ಸುಪ್ರೀಂಕೋರ್ಟ್, ವಿಶೇಷ ನ್ಯಾಯಾಲಯಗಳಿಂದಲೇ ಇಂಥ ಪ್ರಕರಣಗಳು ಇತ್ಯರ್ಥವಾಗಬೇಕೆಂದೂ ಸೂಚಿಸಿದೆ.  ಫೋಕ್ಸೊ (ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ) ಕಾಯ್ಡೆ ಅಡಿ ದಾಖಲಾದ ಪ್ರಕರಣಗಳ ವಿಚಾರಣೆ ವೇಳೆ ಅನಗತ್ಯವಾಗಿ ಮುಂದೂಡಿಕೆ ಮಾಡದಂತೆ ವಿಚಾರಣಾ ನ್ಯಾಯಾಲಯದ ನ್ಯಾಯಮೂರ್ತಿಗಳಿಗೆ ಹೈಕೋರ್ಟ್‍ಗಳು ನಿರ್ದೇಶನ ನೀಡುವಂತೆಯೂ ಸುಪ್ರೀಂಕೋರ್ಟ್ ತಿಳಿಸಿದೆ.

ಮುಖ್ಯ ನ್ಯಾಯಮೂರ್ತಿ ದೀಪಕ್ ಮಿಶ್ರಾ ನೇತೃತ್ವದ ಪೀಠವು ಇಂದು ಈ ಸಂಬಂಧ ರಾಷ್ಟ್ರದ ಎಲ್ಲ ಉಚ್ಚ ನ್ಯಾಯಾಲಯಗಳಿಗೆ ಕೆಲವು ಮಹತ್ವದ ಸೂಚನೆಗಳನ್ನು ನೀಡಿದೆ.  ಮಕ್ಕಳ ಮೇಲಿನ ಅತ್ಯಾಚಾರ ಮತ್ತು ಲೈಂಗಿಕ ದೌರ್ಜನ್ಯಗಳ ವಿಚಾರಣೆಗಳ ಬಗ್ಗೆ ಉಸ್ತುವಾರಿ ವಹಿಸಲು ಮತ್ತು ಕ್ರಮಬದ್ಧಗೊಳಿಸಲು ಹೈಕೋರ್ಟ್‍ಗಳು ತ್ರಿಸದಸ್ಯರ ಸಮಿತಿಯೊಂದನ್ನು ರಚಿಸಬಹುದಾಗಿದೆ ಎಂದು ಸರ್ವೋಚ್ಚ ನ್ಯಾಯಾಲಯದ ಪೀಠ ಹೇಳಿದೆ.  ಪ್ರಕರಣವೊಂದರ ಸಂಬಂಧ ವಕೀಲ ಅಲ್ಕಾ ಅಲೋಕ್ ಶ್ರೀವಾಸ್ತವ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯೊಂದರ ವಿಚಾರಣೆ ನಡೆಸಿದ ಸಂದರ್ಭದಲ್ಲಿ ಸುಪ್ರೀಂಕೋರ್ಟ್ ಈ ಮೇಲಿನ ಅಂಶಗಳನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ಸೂಚಿಸಿದೆ.  ನ್ಯಾಯಮೂರ್ತಿಗಳಾದ ಎ.ಎಂ.ಖಾನ್ವಿಲ್ಕರ್ ಮತ್ತು ಡಿ.ವೈ.ಚಂದ್ರಚೂಡ್ ಈ ಪೀಠದಲ್ಲಿದ್ದರು.

Facebook Comments

Sri Raghav

Admin