ಸಿಎಂ ಸಿದ್ದು ಸರ್ಕಾರದಿಂದ ರಾಜ್ಯ ಹಸಿವು ಮುಕ್ತ : ಡಿಕೆಶಿ

ಈ ಸುದ್ದಿಯನ್ನು ಶೇರ್ ಮಾಡಿ

DKShivakumar
ಚನ್ನರಾಯಪಟ್ಟಣ, ಮೇ 2- ಮತ್ತೊಮ್ಮೆ ಕಾಂಗ್ರೆಸ್ ಪಕ್ಷ 132 ಸ್ಥಾನ ಗೆಲ್ಲುವ ಮೂಲಕ ರಾಜ್ಯದಲ್ಲಿ ಮತ್ತೊಮ್ಮೆ ಅಧಿಕಾರ ಹಿಡಿಯಲಿದೆ ಎಂದು ಇಂಧನ ಸಚಿವ ಡಿ.ಕೆ.ಶಿವಕುಮಾರ್ ಭವಿಷ್ಯ ನುಡಿದಿದ್ದಾರೆ. ಶ್ರವಣಬೆಳಗೊಳ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಸಿ.ಎಸ್.ಪುಟ್ಟೇಗೌಡರ ಪರ ಮತಯಾಚನೆ ಮಾಡಿ ಮಾತನಾಡಿದ ಅವರು, ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಕಳೆದ ಭಾರಿ ನೀಡಿದ್ದ ಆಶ್ವಾಸನೆಗಳನ್ನು ಸಂಪೂರ್ಣವಾಗಿ ಜಾರಿಗೆ ತರಲಾಗಿದೆ. ಅದರಂತೆ ರಾಜ್ಯದ ಜನರಿಗೆ ಉಚಿತ ಅಕ್ಕಿ ಕೊಡುವ ಮುಖಾಂತರ ಹಸಿವು ಮುಕ್ತ ಕರ್ನಾಟಕಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಸರ್ಕಾರದಿಂದ ಹಸಿವು ಮುಕ್ತವಾಗಿದೆ ಎಂದರು.
ಹಲವು ಜನಪ್ರಿಯ ಭಾಗ್ಯಗಳ ಘೋಷಣೆಯಿಂದ ರಾಜ್ಯದಲ್ಲಿ ದೀನದಲಿತರು, ಹಿಂದೂಳಿದ ವರ್ಗದವರು, ಅಲ್ಪಸಂಖ್ಯಾತರು, ರೈತರು ಹೀಗೆ ಎಲ್ಲಾ ವರ್ಗದ ಜನರಿಗೆ ಅನೇಕ ಜನಪ್ರಿಯ ಕಾರ್ಯಕ್ರಮಗಳನ್ನು ಜಾರಿಗೆ ತಂದು ಆರ್ಥಿಕವಾಗಿ ಸದೃಢಗೊಳಿಸಿದ್ದಾರೆ ಎಂದು ಹೇಳಿದರು.

ಈ ಭಾರಿಯ ಚುನಾವಣೆಯಲ್ಲಿ ಸಿ.ಎಸ್.ಪುಟ್ಟೇಗೌಡರನ್ನು ಗೆಲ್ಲಿಸುವ ಮೂಲಕ ಕ್ಷೇತ್ರದಲ್ಲಿ ಕಾಂಗ್ರೆಸ್ ಭಾವುಟ ಹಾರಬೇಕಾಗಿದೆ. ಈ ಭಾಗದ ನೀರಾವರಿ ಯೋಜನೆಗೆ ಪುಟ್ಟೇಗೌಡರ ಗೆಲುವಿನಿಂದ ಮಾತ್ರ ಅನುಷ್ಠಾನಗೊಳ್ಳಲು ಸಾಧ್ಯ ಎಂದರು. ಕಾರ್ಯಕರ್ತರೆಲ್ಲರೂ ಒಗ್ಗಟ್ಟಿನಿಂದ ಪಕ್ಷದ ಅಭ್ಯರ್ಥಿ ಪರ ಮನೆ ಮನೆಗೆ ತೆರಳಿ ಕಾಂಗ್ರೆಸ್ ಪಕ್ಷದ ಕಾರ್ಯಗಳನ್ನು ತಿಳಿಸಿ ಪುಟ್ಟೇಗೌಡರನ್ನು ಗೆಲ್ಲಿಸುವಂತೆ ಕರೆ ನೀಡಿದರು.  ಕಾಂಗ್ರೆಸ್ ಅಭ್ಯರ್ಥಿ ಸಿ.ಎಸ್.ಪುಟ್ಟೇಗೌಡ, ಎಂಎಲ್‍ಸಿ ಗೋಪಾಲಸ್ವಾಮಿ, ಮುಖಂಡರಾದ ಎಂ.ಶಂಕರ್, ದೀಪು ಶ್ರೀಕಂಠಯ್ಯ, ಜತ್ತೇನಹಳ್ಳಿ ರಾಮಚಂದ್ರ, ನುಗ್ಗೇಹಳ್ಳಿ ಕಿರಣ್, ತಾಲ್ಲೂಕು ಅಲ್ಪಸಂಖ್ಯಾತರ ಘಟಕದ ಅಧ್ಯಕ್ಷ ಸಮೀರ್ ಉಲ್ಲಾಖಾನ್ ಹಾಜರಿದ್ದರು.

Facebook Comments

Sri Raghav

Admin