ಕರ್ನಾಟಕ ನೀರು ಬಿಡುವ ಪರಿಸ್ಥಿತಿಯಲ್ಲಿ ಇಲ್ಲ : ಎಂ.ಬಿ.ಪಾಟೀಲ್

ಈ ಸುದ್ದಿಯನ್ನು ಶೇರ್ ಮಾಡಿ

MB-Patil-01

ವಿಜಯಪುರ, ಮೇ 3-ಕಾವೇರಿ ಜಲಾನಯನ ಭಾಗದಲ್ಲಿ ನೀರಿನ ಸಂಗ್ರಹದ ಪ್ರಮಾಣ ಕಡಿಮೆ ಇದ್ದು, ಕರ್ನಾಟಕವೇ ಸಂಕಷ್ಟ ಪರಿಸ್ಥಿತಿಯಲ್ಲಿರುವಾಗ ತಮಿಳುನಾಡಿಗೆ ನೀರು ಬಿಡಲು ಸಾಧ್ಯವಾಗುವುದಿಲ್ಲ ಎಂದು ಜಲಸಂಪನ್ಮೂಲ ಸಚಿವ ಎಂ.ಬಿ.ಪಾಟೀಲ್ ತಿಳಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾವೇರಿ ಜಲಾನಯನ ಭಾಗದ ಜಲಾಶಯಗಳಲ್ಲಿ ಕೇವಲ 9 ಟಿಎಂಸಿ ಅಡಿ ನೀರು ಮಾತ್ರ ಸಂಗ್ರಹವಾಗಿದ್ದು, ಇದು ಕುಡಿಯುವ ನೀರು ಹಾಗೂ ಬೆಳೆಗಳಿಗೂ ಸಾಲದಂತಹ ಪರಿಸ್ಥಿತಿ ಇದೆ. ಇಂತಹ ಪರಿಸ್ಥಿತಿಯಲ್ಲಿ ತಮಿಳುನಾಡಿಗೆ ನೀರು ಬಿಡಬೇಕೆಂಬ ಸುಪ್ರೀಂಕೋರ್ಟ್‍ನ ಆದೇಶ ಪಾಲನೆ ಮಾಡುವುದು ಅಸಾಧ್ಯವಾಗಿದೆ. ವಾಸ್ತವ ಪರಿಸ್ಥಿತಿಯನ್ನು ಸುಪ್ರೀಂಕೋರ್ಟ್‍ಗÉ ರಾಜ್ಯದ ಪರವಾಗಿ ಮನವರಿಕೆ ಮಾಡಿಕೊಡಲಾಗುವುದು ಎಂದರು.

Facebook Comments

Sri Raghav

Admin